ಕುಮಟಾ ಶಾಸಕ ದಿನಕರ ಶೆಟ್ಟಿ ಗೆಲುವಿಗೆ ಹೈಕೋರ್ಟ್ ಮುದ್ರೆ: ಮತ ಎಣಿಕೆ ಅಕ್ರಮದ ಆರೋಪ ತಳ್ಳಿಹಾಕಿದ ನ್ಯಾಯಾಲಯ

Date:

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಗೆಲುವಿಗೆ ಕರ್ನಾಟಕ ಹೈಕೋರ್ಟ್ ಅಧಿಕೃತ ಸಮ್ಮತಿ ನೀಡಿದೆ. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

- Advertisement -

ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2023ರ ಚುನಾವಣೆಯಲ್ಲಿ ದಿನಕರ ಶೆಟ್ಟಿ ಅವರು 59,966 ಮತಗಳನ್ನು ಗಳಿಸಿ, ಜೆಡಿಎಸ್‌ನ ಸೂರಜ್ ನಾಯ್ಕ ಸೋನಿ(59,293 ಮತ) ವಿರುದ್ಧ ಕೇವಲ 673 ಮತಗಳ ಅಂತರದಿಂದ ಗೆದ್ದಿದ್ದರು. ಮತ ಎಣಿಕೆಯ ಆರಂಭದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸ್ಪರ್ಧೆ ತೀವ್ರವಾಗಿತ್ತು. ನಿರ್ಣಾಯಕವಾದ 14 ಮತ್ತು 15ನೇ ಸುತ್ತುಗಳ ಎಣಿಕೆಯಲ್ಲಿ ಜೆಡಿಎಸ್ ಅಲ್ಪ ಮುನ್ನಡೆ ಪಡೆದಿತ್ತು. ಈ ಸಮಯದಲ್ಲಿ ಎರಡು ಎವಿಎಂ ಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಿವಿಪ್ಯಾಟ್ ಸ್ಲಿಪ್‌ಗಳ ಮರು ಎಣಿಕೆ ನಡೆಯಿತು. ಫಲಿತಾಂಶ ಘೋಷಣೆಯಲ್ಲಿ ಆದ ಈ ವಿಳಂಬವನ್ನು ಅಕ್ರಮವೆಂದು ಆರೋಪಿಸಿ ಸೋನಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ತೀರ್ಪು

“ನ್ಯಾಯಾಲಯವು ಈ ಕುರಿತು ತೀರ್ಪು ನೀಡುವಾಗ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳಿಲ್ಲವೆಂದು ಸ್ಪಷ್ಟಪಡಿಸಿದೆ. ಅದರೊಂದಿಗೆ ದಿನಕರ ಶೆಟ್ಟಿಯವರ ಗೆಲುವಿಗೆ ಅಧಿಕೃತ ಮಾನ್ಯತೆ ನೀಡಲಾಗಿದೆ” ಎಂದು ದಿನಕರ ಶೆಟ್ಟಿಯವರು ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಲಮೇಲ | ಭೀಮಾನದಿ ತೀರದಲ್ಲಿ ಪ್ರವಾಹ ಹೆಚ್ಚಳ; ಮೂರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭ

ʼಕ್ಷೇತ್ರದ ಜನರು ಸದಾ ನನ್ನೊಂದಿಗಿದ್ದಾರೆ. ನ್ಯಾಯಾಲಯವೇ ಸತ್ಯವನ್ನು ಹೊರಹಾಕಿದೆ. ಪ್ರತಿಸ್ಪರ್ಧಿಗಳು ಜನರ ಮನದಲ್ಲಿ ಗೊಂದಲ ಸೃಷ್ಟಿಸಿದ್ದರು. ಆದರೆ ಇದೀಗ ಸತ್ಯ ಗೆದ್ದಿದೆ. ನನ್ನ ಮೇಲೆ ಜನರು ತೋರಿಸಿರುವ ವಿಶ್ವಾಸಕ್ಕೆ ನಾನು ಸದಾ ಋಣಿʼ ಎಂದಿದ್ದ ರಾಜಕೀಯ ಪಯಣಕ್ಕೆ ಈ ತೀರ್ಪಿನೊಂದಿಗೆ ಕ್ಷೇತ್ರದಲ್ಲಿ ಕಳೆದ ಎರಡೂವರೆ ವರ್ಷಗಳಿಂದಿದ್ದ ಗೊಂದಲಗಳಿಗೆ ತೆರೆ ಬಿದ್ದಂತಾಯಿತು. ದಿನಕರ ಶೆಟ್ಟಿಯವರು ಹಿಂದೆ ಎರಡು ಬಾರಿ ಬಿಜೆಪಿಯಿಂದ ಮತ್ತು ಒಮ್ಮೆ ಜೆಡಿಎಸ್‌ನಿಂದ ಶಾಸಕನಾಗಿ ಆಯ್ಕೆಯಾಗಿ ಈಗಾಗಲೇ ಮೂರು ಬಾರಿ ಕುಮಟಾ-ಹೊನ್ನಾವರ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ಹಿಂದೆ ಜೆಡಿಎಸ್ ಅಭ್ಯರ್ಥಿಯಾಗಿದ್ದಾಗ ಕೇವಲ 20 ಮತಗಳ ಅಂತರದಿಂದ ಅವರು ಗೆದ್ದಿದ್ದು, ಆಗಲೂ ಅವರ ಜಯವನ್ನು ಕೋರ್ಟ್ ಸಮರ್ಥಿಸಿತ್ತು ಎಂಬುದು ಗಮನಾರ್ಹ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...