ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ; ಸಮೀರ್‌ಗೆ ನೋಟಿಸ್ ನೀಡಿದ ಪೊಲೀಸರಿಗೆ ಹೈಕೋರ್ಟ್ ತರಾಟೆ

Date:

ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ ಡಿಗೆ ನೋಟಿಸ್‌ ನೀಡಿದ ಪೊಲೀಸರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಮೀರ್ ಅವರನ್ನು ಬಂಧಿಸದಂತೆ ತಡೆ ನೀಡಿದೆ.

- Advertisement -

“ದೂತ ಸಮೀರ್” ಅವರಿಗೆ ಪೊಲೀಸರು ಮನೆಗೆ ಬಂದು ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಲೈವ್‌ನಲ್ಲಿ ಮಾಹಿತಿ ನೀಡಿರುವ ಸಮೀರ್, “ಪೊಲೀಸರು ನನ್ನ ನಿವಾಸಕ್ಕೆ ಆಗಮಿಸಿ ಬಂಧನಕ್ಕೆ ಮುಂದಾಗಿದ್ದರು. ಆದರೆ ನಾನು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ ಬಳಿಕ ನೋಟಿಸ್ ನೀಡಿ ಹಿಂದಿರುಗಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಸಮೀರ್ 35 ಲಕ್ಷ ತಗೊಂಡು ವಿಡಿಯೋ ಮಾಡಿದ್ರ?

ಇದೀಗ ಬಂಧನದಿಂದ, ವಿಚಾರಣೆಯಿಂದ ಸಮೀರ್‌ಗೆ ಹೈಕೋರ್ಟ್ ರಿಲೀಫ್ ನೀಡಿದೆ ಎಂದು ವರದಿಯಾಗಿದೆ. “ಪೊಲೀಸ್ ಠಾಣೆಗೆ ಕರೆಯುವ ಹಾಗಿಲ್ಲ. ಬಂಧಿಸುವಂತಿಲ್ಲ” ಎಂದು ಆದೇಶಿಸಿರುವ ಹೈಕೋರ್ಟ್ ಕಾನೂನು ಉಲ್ಲಂಘಿಸಿ ನೋಟಿಸ್ ನೀಡಿದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಈ ನಡುವೆ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ ಬಳ್ಳಾರಿಯ ಕೌಲ್‌ಬಝಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ವಿಡಿಯೋವನ್ನು ಮೂಲಕ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ಮೇಲೆ ನಂಬಿಕೆ ಹೊಂದಿರುವ ಜನರ ಭಾವನೆಗೆ ಧಕ್ಕೆಯಾಗುವಂತೆ ಮಾಡಲಾಗಿದೆ ಎಂದು ಪೊಲೀಸರು ತಾವಾಗಿಯೇ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕನ್ನಡ ಯೂಟ್ಯೂಬರ್‌ ಸಮೀರ್‌ನಿಂದಾಗಿ ಮತ್ತೆ ಸುದ್ದಿಯಾದ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣ: ಎಡಿಜಿಪಿಯಿಂದ ನೋಟಿಸ್!

ಆರೋಪಿಗಳು ಯಾರೆಂದು ಕುಟುಂಬಸ್ಥರು, ಸ್ಥಳೀಯರು ಹೇಳುತ್ತಿದ್ದರೂ ಕೂಡಾ ಇಂದಿಗೂ ನ್ಯಾಯಸಿಗದೆ, ಬಗೆಹರಿಯದೆಯೇ ಉಳಿದಿರುವ ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಯೂಟ್ಯೂಬರ್ ಸಮೀರ್ ದೀರ್ಘವಾದ, ವಿವರವಾದ ವಿಡಿಯೋವನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್‌ ಆಗಿದ್ದು ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ.

ಈ ಬೆನ್ನಲ್ಲೇ ಸಮೀರ್‌ಗೆ ಬೆದರಿಕೆ ಕರೆಗಳೂ, ಕಾಮೆಂಟ್‌ಗಳು ಕೂಡಾ ಬಂದಿದೆ. ಸಮೀರ್ ಪರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳೂ ಹರಿದಾಡುತ್ತಿದೆ. ಇವೆಲ್ಲವುದರ ನಡುವೆ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಕಳುಹಿಸಿದ್ದಾರೆ. ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಜಿಲ್ಲಾ ಪೊಲೀಸ್ ವಿಭಾಗದಲ್ಲಿ ರಚನೆಯಾಗಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚುರುಕುಗೊಳಿಸುವಂತೆ ಎಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೀಗ ಸಮೀರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...