ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Date:

ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿದ್ದ ಪುತ್ತೂರು ಸಹಾಯಕ ಆಯುಕ್ತರ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರಿಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ.

- Advertisement -

ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಡಿಸೆಂಬರ್ 18ರಂದು ಆದೇಶಿಸಿದ್ದರು. ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸಹಾಯಕ ಕಮಿಷನರ್ ನೀಡಿರುವ ಆದೇಶವು ಸಮರ್ಪಕವಾಗಿಲ್ಲವೆಂದು ಹೇಳಿದೆ. ಅಲ್ಲದೆ, 21 ದಿನದೊಳಗೆ ಪ್ರಕರಣದ‌ ಮರು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಪುತ್ತೂರು ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಹಿಂದೆಯೂ, 2025ರ  ಸೆಪ್ಟೆಂಬರ್ 20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ ಎಂದು ಹೇಳಿದ್ದರು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆಗಲೂ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿತ್ತು. ಮರುಪರಿಶೀಲನೆಗೆ ಸೂಚಿಸಿತ್ತು. ಅದಾದ ಬಳಿಕ, ಡಿಸೆಂಬರ್ 18ರಂದು ಮತ್ತೊಮ್ಮೆ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...