ಚಿತ್ತಾಪುರದಲ್ಲಿ ನ.2ರಂದು RSS ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ

Date:

ಕಲಬುರಗಿಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಪಥಸಂಚಲನವನ್ನು ನವೆಂಬರ್ 2ರಂದು ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹಾಗೆಯೇ ಅರ್ಜಿದಾರರ ಮನವಿಯನ್ನು ಪರಿಗಣಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.

- Advertisement -

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಸರ್ಕಾರವು ಅನುಮತಿ ನೀಡಿರಲಿಲ್ಲ. ಅವಕಾಶ ನೀಡದ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್‌ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಕೋರ್ಟ್‌ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸರ್ಕಾರಿ ಜಾಗದಲ್ಲಿ RSS ಸೇರಿ ಎಲ್ಲ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ

ಈ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಜಿಎಸ್‌ ಕಮಲ್ ಅವರ ಏಕಸದಸ್ಯ ಪೀಠವು, ಪಥಸಂಚಲನಕ್ಕೆ ಅವಕಾಶ ನೀಡಿದೆ. ಆದರೆ ನವೆಂಬರ್ 2ರಂದು ನಡೆಸುವಂತೆ ತಿಳಿಸಿದೆ. ಹಾಗೆಯೇ ಪಥಸಂಚಲನದ ಮಾರ್ಗಗಳ ಮಾಹಿತಿ ಒಳಗೊಂಡಂತೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಾದಿಸಿದ ವಕೀಲರು, “ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಂದೇ ದಿನ, ಒಂದೇ ಸ್ಥಳದಲ್ಲಿ ಹಲವು ಸಂಘಟನೆಗಳಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗದು” ಎಂದು ಹೇಳಿದ್ದಾರೆ. ಈ ವೇಳೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸುವಂತೆ ಹೈಕೋರ್ಟ್ ಸೂಚಿಸಿದೆ.

ಹಾಗೆಯೇ ಮೆರವಣಿಗೆ ಸಂಬಂಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್ 24ರಂದು ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...