ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Date:

Advertisements
  • ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರ ನೇತೃತ್ವದ ಏಕಸದಸ್ಯ ಪೀಠದಿಂದ ವಿಚಾರಣೆ
  • ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆ

ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ – ಎಚ್‌ಎಸ್‌ಆರ್‌ಪಿ) ಅಳವಡಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯ ಕುರಿತು ಸೆ. 19ರಂದು ಪರಿಗಣಿಸಲಾಗುವುದು ಎಂದು ತಿಳಿಸಿ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ರಾಜ್ಯ ಸರ್ಕಾರದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಅತಿ ಸುರಕ್ಷಿತ ನೋಂದಣಿ ಫಲಕಗಳ ಭಾರತೀಯ ಉತ್ಪಾದಕರ ಒಕ್ಕೂಟ ಸೇರಿದಂತೆ ಅವಕಾಶ ವಂಚಿತ ಕೆಲ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ಪೀಠವು, ರಾಜ್ಯ ಸರ್ಕಾರದ ಅಧಿಸೂಚನೆಗೆ ತಡೆ ನೀಡುವಂತೆ ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ. ಇದರ ಬಗ್ಗೆ ಸೆಪ್ಟೆಂಬರ್‌ 19ರಂದು ಪರಿಗಣಿಸಲಾಗುವುದು. ಅಷ್ಟರೊಳಗೆ ಅರ್ಜಿದಾರರ ಮಧ್ಯಂತರ ಮನವಿ ಬಗ್ಗೆ ರಾಜ್ಯ ಸರ್ಕಾರ ತನ್ನ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

Advertisements

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುಂಚೆ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಅರ್ಜಿದಾರ ಸಂಸ್ಥೆಯನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂಬುದು ಅರ್ಜಿದಾರರು ದೂರಿನಲ್ಲಿ ಉಲ್ಲೇಖಿಸಿದ್ದರು.

ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಆದಿತ್ಯ ಸೋಂಧಿ, ಅಧಿಕೃತ ಡೀಲರ್‌ಗಳ ಪರವಾಗಿ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ, ದೇವದತ್ ಕಾಮತ್ ವಾದ ಮಂಡಿಸಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಂ ಹುಯಿಲಗೋಳ ವಾದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X