ತುಮಕೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ : ಮುಂಜಾಗ್ರತೆವಹಿಸಲು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ

Date:

 ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ತುಮಕೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಇದರಿಂದ ಬಿಸಿ ಶಾಖದ ಅಲೆಯಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಸಲಹೆ ನೀಡಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. 

- Advertisement -

 ಸಾರ್ವಜನಿಕರು ರೇಡಿಯೋ, ಟಿ.ವಿ., ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

 ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ. ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ ತಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಬೇಕು.  

1001225664

 ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿಯನ್ನು ಬಳಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ಹಣ್ಣಿನ ಶರಬತ್, ಮಜ್ಜಿಗೆ ಇತ್ಯಾದಿಗಳನ್ನು ಬಳಸುವುದರಿಂದ ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ.

 ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿರಿಸಿ ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ಆದಷ್ಟು ಫ್ಯಾನುಗಳನ್ನು ಬಳಸಬೇಕು. ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡಬೇಕು. 

 ಮಾಲೀಕರು ಕೆಲಸದ ಸ್ಥಳದಲ್ಲಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಆನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.

 ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿರುವವರು ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು. 

  ಮಕ್ಕಳು ಹಾಗೂ ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಬೇಕು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ಹಾಗೂ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು. 

 ಬಿಸಿಲಿನ ಸಮಯದಲ್ಲಿ ಅಡುಗೆ ಮಾಡಬಾರದು. ಅಡುಗೆ ಪ್ರದೇಶಗಳಲ್ಲಿ ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರದು. ಇಂತಹ ಪಾನೀಯಗಳು ಹೊಟ್ಟೆ ನೋವನ್ನು ಉಂಟು ಮಾಡುತ್ತವೆ. 

 ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...