ಜನಿವಾರ ವಿವಾದ | ಅಧಿಕಾರಿಗಳ ನಡೆ ಖಂಡನೀಯ, ವರದಿ ಬಳಿಕ ಕ್ರಮ : ಸಚಿವ ಡಾ.ಎಂ.ಸಿ.ಸುಧಾಕರ್

Date:

ಲೋಪಗಳಾಗದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿತ್ತು. ಆದರೆ, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯದ ಕಾರಣ ಪರೀಕ್ಷೆಗೆ ಅನುಮತಿ ನೀಡಿಲ್ಲ. ಇದು ನಿಜಕ್ಕೂ ಖಂಡನೀಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದರು.

- Advertisement -

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅನುಮತಿ ನೀಡದ ಕಾರಣ ವಿದ್ಯಾರ್ಥಿ ಗಣಿತ ಪರೀಕ್ಷೆ ಬರೆದಿಲ್ಲ. ಎಲ್ಲಾ ಸಂಪ್ರದಾಯಗಳನ್ನು ನಾವು ಗೌರವಿಸಬೇಕು. ಈ ಕುರಿತು ವಿದ್ಯಾರ್ಥಿ ಸುಚಿವ್ರತ್‌ ಕುಲಕರ್ಣಿ ಅವರೊಂದಿಗೆ ಮಾತಾಡಿದ್ದೇನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ನಡೆಯನ್ನು ನಮ್ಮ ಸರಕಾರ ಒಪ್ಪುವುದಿಲ್ಲ. ಈಗಾಗಲೇ ವರದಿ ಕಳಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ವಿದ್ಯಾರ್ಥಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಾತಿ ಗಣತಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾಗಿವೆ. ಕೆಲ ಮಾಹಿತಿಯನ್ನು ಕೇಳಿದ್ದಾರೆ. ಎಲ್ಲರಿಗೂ ಸೂಕ್ತ ಮಾಹಿತಿ ನೀಡಲಾಗುವುದು. ಜತೆಗೆ ಎಲ್ಲರ ಅಭಿಪ್ರಾಯವನ್ನು ಪಡೆದ ಬಳಿಕ ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ವಿಸ್ತೃತವಾದ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಮರು ಜಾತಿಗಣತಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಎಲ್ಲರಿಗೂ ಅವರದೇ ಆದ ಜಾತಿ ಜನಸಂಖ್ಯೆ ಗ್ರಹಿಕೆ ಇತ್ತು. ಯಾರ ಬಳಿಯೂ ನಿಖರವಾದ ಮಾಹಿತಿ ಇಲ್ಲ. ನಿಖರವಾದ ಮಾಹಿತಿಯಿಲ್ಲದ ಕಾರಣ ಮೀಸಲಾತಿ, ರಾಜಕೀಯ ಅಧಿಕಾರದ ಕಾರಣ ಸರಕಾರದ ಮೇಲೆ ಒತ್ತಡ ಹೇರುವ ಕೆಲಸವಾಗುತ್ತಿದೆ. 2011ರಲ್ಲಿ 6 ಕೋಟಿ 11 ಲಕ್ಷ ಇತ್ತು, ನಂತರ 2015ರಲ್ಲಿ 6 ಕೋಟಿ 35 ಲಕ್ಷ ಇತ್ತು. ಈಗಿನ ಸಮೀಕ್ಷೆಯಲ್ಲಿ 5 ಕೋಟಿ 98 ಲಕ್ಷ ಇದೆ. ಸುಮಾರು 2.5ಲಕ್ಷ ಮಂದಿ ನಿಖರವಾದ ಜಾತಿ ಹೇಳಿಲ್ಲ. 1.95ಲಕ್ಷ ಮಂದಿ ಕೆಲವರು ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಿಲ್ಲ. ಹಾಗಾಗಿ ಕೆಲವರಿಗೆ ಕಡಿಮೆ ಎನಿಸಿರಬಹುದು ಎಂದು ಹೇಳಿದರು.

ಇದನ್ನೂ ಓದಿ : ಜನಿವಾರ ವಿವಾದ | ಒಂದು ಕೈಯಲ್ಲಿ ದೊಣ್ಣೆ, ಮತ್ತೊಂದು ಕೈಯಲ್ಲಿ ಬೆಣ್ಣೆ – ಇದು ಬಿಜೆಪಿ ನೀತಿ

ಜಾತಿ ಗಣತಿ ವಿಚಾರದಲ್ಲಿ ವಿರೋಧ ಪಕ್ಷದವರು ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಮೀಕ್ಷೆಯ ಕುರಿತು ಸಂಪೂರ್ಣ ವಿವರವನ್ನು ಸರಕಾರ ಜನರ ಮುಂದಿಡಲಿದೆ. ಮುಂದಿನ ದಿನಗಳಲ್ಲಿ ಸರಕಾರ ಎಲ್ಲರ ಅಭಿಪ್ರಾಯ ಪಡೆದು ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...