ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಾಡಹಬ್ಬ ರಾಜ್ಯೋತ್ಸವದ ಸಂಭ್ರಮ

Date:

ಭಾಷೆ, ಬದುಕು, ಕಸುಬು, ಕಾಯಕ ಆರಾಧನೆ ಆಚರಣೆ ಎಲ್ಲವೂ ಆಗಿ ನಮ್ಮ ನಿತ್ಯದ ಬದುಕಿನ ಜೊತೆಗೆ ಬೆರೆತಿರುವ ನಾಡನುಡಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಮೂಲಕ ಕನ್ನಡವನ್ನು ಕನ್ನಡವಾಗಿ ಉಳಿಸಿಕೊಳ್ಳುವ ಗಟ್ಟಿಯಾದ ಮನಸ್ಥಿತಿ ನಮ್ಮದಾಗಲಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಉಡುಪಿ ಜಿಲ್ಲಾ ಸಂಚಾಲಕ ರಾಮಾಂಜಿಯವರು ಹಾರೈಸಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿತವಾದ ನಾಡಹಬ್ಬ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

- Advertisement -
WhatsApp Image 2025 11 01 at 2.56.12 AM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್, ‘ಕನ್ನಡದ ಹೆಗಲ ಮೇಲೆ ಕುಳಿತು ಸವಾರಿ ನಡೆಸುವ ಭಾಷೆಗಳ ಕುರಿತು ಎಚ್ಚರ ವಹಿಸುವ ಮೂಲಕ ಕನ್ನಡ ರಾಷ್ಟ್ರೀಯತೆಯನ್ನು ಜತನವಾಗಿ ಕಾಪಾಡಿಕೊಳ್ಳಬೇಕಾದ ಹೊಣೆ ನಮ್ಮದು’ ಎಂದರು. ಕನ್ನಡ ವಿಭಾಗ ಮುಖ್ಯಸ್ತರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ. ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಅಪರ್ಣ ಕೆ ಯು ವಂದಿಸಿದ ಈ ಕಾರ್ಯಕ್ರಮವನ್ನು ರಾ.ಸೇ.ಯೋ. ಮತ್ತು ಯೂತ್ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ನಂದೀಶ್‌ಕುಮಾರ್ ಕೆ.ಸಿ. ನಿರೂಪಿಸಿದರು. ಐಕ್ಯುಎಸಿ ಸಂಚಾಲಕ ಡಾ. ಲಿತಿನ್ ಬಿ ಎಂ. ವಿದ್ಯಾರ್ಥಿ ನಾಯಕ ಈರಬಸು ಹಾಗೂ ಇತರ ಬೋಧಕ, ಬೋಧಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 01 at 2.56.11 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...