ಹಿರಿಯೂರು | ಕಾಂಗ್ರೆಸ್‌ಗೆ ಗೆಲುವು; ಬಿಜೆಪಿ ಕಾರ್ಯಕರ್ತನಿಗೆ ಹೃದಯಾಘಾತ

Date:

ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆಲಮರದಹಟ್ಟಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಮೃತ ದುರ್ದೈವಿ ಎಂದು ತಿಳಿದುಬಂದಿದೆ. 

ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್‌ನಿಂದ ಮಾಜಿ ಸಚಿವ ಡಿ. ಸುಧಾಕರ್ ಸ್ಪರ್ಧಿಸಿದ್ದರು. ಜೆಡಿಎಸ್‌ ಪಕ್ಷದಿಂದ ರವೀಂದ್ರ ಕಣದಲ್ಲಿದ್ದರು.

ಈ ಸುದ್ದಿ ಓದಿದ್ದೀರಾ? ಹೊಳೆನರಸೀಪುರದಲ್ಲಿ ದೊಡ್ಡ ರೇವಣ್ಣ, ರಾಮದುರ್ಗದಲ್ಲಿ ಚಿಕ್ಕರೇವಣ್ಣ ಮುನ್ನಡೆ

ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್‌ 5,000 ಮತಗಳ ಅಂತರದಿಂದ ಹಿನ್ನಡೆ ಸಾಧಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ಈರಣ್ಣ ನಿಂತಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಈರಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಆದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...