ಕರಾವಳಿಯಲ್ಲಿ ವಿಪರೀತ ಮಳೆ: ಗುರುವಾರ ಶಾಲೆಗೆ ರಜೆ ಘೋಷಿಸಿದ ದಕ್ಷಿಣ ಕನ್ನಡ ಡಿಸಿ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಹೈಸ್ಕೂಲ್‌ವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ರಜೆ ಘೋಷಿಸಲಾಗಿದ್ದು, ಪಿಯು ಕಾಲೇಜು-ಪದವಿ ಕಾಲೇಜುಗಳಿಗೂ ಕೂಡ ರಜೆ ಘೋಷಿಸುವಂತೆ ಕೆಲ ಪೋಷಕರು ಒತ್ತಾಯಿಸಿದ್ದಾರೆ.

ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರುವ ಜಿಲ್ಲಾಧಿಕಾರಿ, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು-ಪ್ರವಾಸಿಗರು ತೆರಳದಂತೆ ಸೂಚನೆ ನೀಡಿದ್ದಾರೆ.

Advertisements

ಅಲ್ಲದೇ, ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿ-ತೋಡುಗಳ ಸಮೀಪ ಹೋಗಬಾರದು, ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ನಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಪ್ರಕಟಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ: ಮೂರು ದಿನ ಸಿಬಿಐ ಕಸ್ಟಡಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಸಹಾಯವಾಣಿ ಸಂಖ್ಯೆ 1077 ಅಥವಾ 0824-2442590 ದೂರವಾಣಿಯನ್ನು ಸಂಪರ್ಕಿಸುವಂತೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X