ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

Date:

“ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ. ಬಂಧನ ಆಗಿರುವುದಂತೂ ಖಚಿತ. ನಮ್ಮ ಸರ್ಕಾರವು ಸತ್ಯವನ್ನು ಹೊರತರುವುದಕ್ಕಾಗಿಯೇ ಎಸ್‌ಐಟಿಯನ್ನು ರಚಿಸಿದ್ದೇವೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

- Advertisement -

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಾಕ್ಷಿ ದೂರುದಾರನ ದೂರು ಆಧರಿಸಿಯೇ ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಸದ್ಯ ಎಸ್‌ಐಟಿ ತನಿಖೆ ಮುಂದುವರಿದಿದೆ. ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೆ ಯಾವ ಮಾಹಿತಿಯನ್ನೂ ಹಂಚಿಕೊಳ್ಳಲು ಸಾಧ್ಯವಿಲ್ಲ. ಜೊತೆಗೆ ಅದರ ಬಗ್ಗೆ ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಇದರ ಹಿಂದೆ ದೊಡ್ಡ ಜಾಲ ಇದೆ ಎಂಬ ಬಗ್ಗೆಯೂ ಆರೋಪ ಕೇಳಿಬಂದಿದೆ. ಇದನ್ನೂ ಕೂಡ ಪತ್ತೆಯಾಗಬೇಕಲ್ಲವೇ? ಜಾಲವಿದೆಯೇ? ಇಲ್ಲವೇ ಎಂಬ ಬಗ್ಗೆಯೂ ವರದಿ ಬಂದ ಬಳಿಕವಷ್ಟೇ ನನಗೆ ಉತ್ತರಿಸಲು ಸಾಧ್ಯ. ಅಲ್ಲಿಯವರೆಗೂ ಊಹಾಪೋಹಾಗಳು ಮಾತ್ರ ಇರುತ್ತದೆ” ಎಂದು ಗೃಹ ಸಚಿವರು ತಿಳಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ದೂರುದಾರನ ಬಂಧನದಿಂದ ಎಸ್‌ಐಟಿ ತನಿಖೆ ನಿಲ್ಲುತ್ತದೆ ಎಂಬುದರ ಬಗ್ಗೆ ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಸುಜಾತ ಭಟ್‌ ಅವರ ಪ್ರಕರಣದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಹಾಗಾಗಿ, ಯಾವುದೇ ವಿಚಾರವನ್ನು ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಎಲ್ಲ ಮಾಹಿತಿಯನ್ನು ಹಂಚಿಕೊಂಡಲ್ಲಿ ತನಿಖೆಗೆ ತೊಡಕಾಗುತ್ತದೆ. ಬಿಜೆಪಿಯವರು ಆರೋಪ ಮಾಡುತ್ತಲೇ ಇರುತ್ತಾರೆ. ಬೇರೆ ಬೇರೆಯವರ ಹೇಳಿಕೆಗಳನ್ನೂ ಗಮನಿಸಿದ್ದೇನೆ. ಎಲ್ಲ ಹೇಳಿಕೆಗಳ ಆಧಾರದ ಮೇಲೆ ನಾವು ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಪರಮೇಶ್ವರ್ ತಿಳಿಸಿದ್ದಾರೆ.

“ಸಾಕ್ಷಿ ದೂರುದಾರನನ್ನು ಸಂಶಯದಿಂದ ಬಂಧಿಸಲಾಗಿದೆಯೇ ಅಥವಾ ಯಾವ ಸೆಕ್ಷನ್‌ಗಳ ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬುದು ಎಲ್ಲವೂ ಎಸ್‌ಐಟಿ ತನಿಖೆಗೆ ಬಿಟ್ಟದ್ದು. ಬಂಧಿಸಿರುವುದಂತೂ ಖಚಿತ. ಸತ್ಯವನ್ನು ಹೊರತರುವುದಷ್ಟೇ ಎಸ್‌ಐಟಿ ಕೆಲಸ. ದೂರುದಾರನ ಮಂಪರು ಪರೀಕ್ಷೆ ಮಾಡಬೇಕೋ ಬೇಡವೋ ಎಂಬುದು ಎಸ್‌ಐಟಿ ಮುಖ್ಯಸ್ಥರ ಜವಾಬ್ದಾರಿ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...