ಡಿಜೆ ಹಳ್ಳಿ, ಕೆಜಿ ಹಳ್ಳಿ ಸೇರಿ ಇತರೆ ಹಿಂಸಾಚಾರ ಪ್ರಕರಣ ಪರಿಶೀಲಿಸಿ, ಹಿಂಪಡೆಯಲು ಗೃಹ ಸಚಿವ ಪರಮೇಶ್ವರ್‌ ಸೂಚನೆ

Date:

Advertisements
  • ತನ್ವೀರ್ ಸೇಠ್​ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು
  • ಗಲಭೆ ಪ್ರಕರಣಗಳನ್ನು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯಿರಿ

ಬೆಂಗಳೂರು ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ರಾಜ್ಯದ ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಕೋಮು ಗಲಭೆ ಪ್ರಕರಣಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಸದರಿ ಪ್ರಕರಣಗಳನ್ನು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯಲು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸೂಚಿಸಿದ್ದಾರೆ.

ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಮೈಸೂರಿನ ಎನ್​.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರದ ಮೂಲಕ ಗೃಹಸಚಿವರಿಗೆ ಮನವಿ ಮಾಡಿದ್ದರು.

ಡಾ.ಜಿ ಪರಮೇಶ್ವರ್ ಅವರು ತನ್ವೀರ್ ಸೇಠ್​ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

Advertisements
ತನ್ವೀರ್‌ ಸೇಠ್

ತುಷ್ಟೀಕರಣ ರಾಜಕಾರಣ: ಯತ್ನಾಳ್‌

ಡಿಜೆ ಹಳ್ಳಿ, ಕೆಜಿ ಹಳ್ಳಿ, ಹುಬ್ಬಳ್ಳಿ, ಶಿವಮೊಗ್ಗದಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಶಾಸಕ ತನ್ವೀರ್ ಸೇಠ್​ ಬರೆದಿರುವ ಮನವಿ ಪತ್ರವನ್ನು ಗೃಹ ಸಚಿವ ಪರಮೇಶ್ವರ ಅನುಮೋದಿಸಿರುವ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದು, “ಗೃಹ ಸಚಿವರು ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು, “ರಾಜ್ಯದಲ್ಲಿ ನಡೆದ ಗಲಭೆ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದ ಪಿಎಫ್‌ಐ ಗೂಂಡಾಗಳ ವಿರುದ್ಧದ ಪ್ರಕರಣಗಳನ್ನು ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿತ್ತು. ಇದೀಗ ಗಲಭೆಕೋರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ ಅವರು ಗೃಹ ಕಾರ್ಯದರ್ಶಿಗೆ ಸೂಚಿಸಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

ಪರಮೇಶ್ವರ್​ ಸ್ಪಷ್ಟನೆ

ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸತ್ಯಾಂಶ, ಕಾನೂನಾತ್ಮಕ ಅಂಶಗಳಿದ್ದರೆ ಮಾತ್ರ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಗಲಭೆ ಆರೋಪಿಗಳ ಕೇಸ್ ವಾಪಸ್ ಬಗ್ಗೆ ಸಚಿವ ಸಂಪುಟ ಉಪಸಮತಿ ವರದಿ ನೀಡುತ್ತದೆ. ನಂತರ ಸಚಿವ ಸಂಪುಟದಲ್ಲಿ ತೀರ್ಮಾನವಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

Download Eedina App Android / iOS

X