ಕಲಬುರಗಿ | ಹನಿಟ್ರ್ಯಾಪ್ ಆರೋಪ; ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ ಹಲವರ ವಿರುದ್ಧ ಎಫ್‌ಐಆರ್: ಓರ್ವನ ಬಂಧನ

Date:

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ​​ಖೆಡ್ಡಾಗೆ ಬೀಳಿಸುತ್ತಿದ್ದ ದಂಧೆಯೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

- Advertisement -

ಹನಿಟ್ರ್ಯಾಪ್ ದಂಧೆ ಆರೋಪಿಸಿ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ ಒಟ್ಟು ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಆರೋಪಿಗಳು ಸಾಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿ, ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೊಡ್ಡ ದೊಡ್ಡ ಉದ್ಯಮಿ, ಸರ್ಕಾರಿ ಅಧಿಕಾರಿಗಳನ್ನು ಗುರಿ ಮಾಡಿರುವುದಾಗಿ ಆರೋಪಿಸಲಾಗಿದೆ.

ಅಲ್ಲದೇ, ಈ ಸಂಬಂಧ ಮಹಾರಾಷ್ಟ್ರ ಮೂಲದ ಇಬ್ಬರು ಯುವತಿಯರು ಮತ್ತು ಕಲಬುರಗಿ ಜಿಲ್ಲೆಯ ಓರ್ವ ವಿವಾಹಿತ ಮಹಿಳೆಯು ಭೀಮ್ ಆರ್ಮಿ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ಮಾಡಿದ್ದಾರೆ.

“ದಲಿತ ಸೇನೆ ರಾಜ್ಯಾಧ್ಯಕ್ಷ, ವಕೀಲರೂ ಆಗಿರುವ ಹಣಮಂತ ಯಳಸಂಗಿ ಹಾಗೂ ಸಹಚರರು ತಮ್ಮನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಹಲವರಿಂದ ಹಣ ಪಡೆದಿದ್ದಾರೆ. ಹನಿಟ್ರ್ಯಾಪ್​ ಮೂಲಕ ಕಮಲಾಪುರ ಪೊಲೀಸ್​​ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್​​ ಪೇದೆಗೆ ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಯಳಸಂಗಿ ಸಹಚರ ರಾಜು ಲೆಂಗಟಿ ಬಂಧನ

ಯುವತಿಯರು ಮತ್ತು ಮಹಿಳೆಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮೂಲಕ ಹಲವರಿಂದ ಹಣ ಪಡೆದ ಆರೋಪದ ಮೇಲೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹನುಮಂತ್ ಯಳಸಂಗಿ ಅವರ ಸಹಚರ ಕಮಲಾಪುರ ಸಂಘಟನೆಯ ತಾಲೂಕು ಅಧ್ಯಕ್ಷ ರಾಜು ಲೆಂಗಟಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

image 4 1
ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಸಹಚರ ರಾಜು ಲೆಂಗಟಿ

ಈ ಪ್ರಕರಣದ ಕುರಿತು ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಡಿ. ಅವರು ಸಂತ್ರಸ್ತೆಯರ ಅಹವಾಲುಗಳನ್ನು ಕೇಳಿ, ಪ್ರಕರಣದ ತನಿಖೆಗೆ ಸೂಚಿಸಿದ್ದರು. ರಾಜು ಲೆಂಗಟಿಯನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಬಂಧನ ನಡೆಸಲು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...