ಉಡುಪಿ | ಯುವ ವಕೀಲರಿಗೆ ಹನಿಟ್ರ್ಯಾಪ್‌ ಯತ್ನ : ಪ್ರಕರಣ ದಾಖಲು

Date:

ಯುವ ವಕೀಲ ಒಬ್ಬರಿಗೆ ಹೆದರಿಸಿ ಹಣ ವಸೂಲಿ ಮಾಡಿಕೊಂಡು ಹೋಗಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ದೇವೇಂದ್ರ ಮತ್ತು ಮೂಕಾಂಬಿಕ ಎಂಬ ಇಬ್ಬರು ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

- Advertisement -

ನೀಲ್ ಬ್ರಾಯನ್ ಪಿರೇರಾ ಎಂಬ ವಕೀಲರು ಕುಂದಾಪುರ ನ್ಯಾಯಾಲಯದಲ್ಲಿ ವಕೀಲರಾಗಿ ಕೆಲಸವನ್ನು ಮಾಡಿಕೊಂಡಿದ್ದು ಕೋಟದಲ್ಲಿ ತನ್ನ ಹಿರಿಯ ವಕೀಲರ ಬಳಿ ಕಿರಿಯ ಸಹಾಯಕನಾಗಿ ಕೆಲಸಮಾಡಿಕೊಂಡಿರುತ್ತಾರೆ, 2023 ರ ಜನವರಿ ತಿಂಗಳಲ್ಲಿ ನೀಲ್ ಅವರು ಕಚೇರಿಯಲ್ಲಿ ಇದ್ದಾಗ ದೇವೆಂದ್ರ ಸುವರ್ಣ ಎಂಬವರು ಮೂಕಾಂಬು ಎಂಬ ಮಹಿಳೆಯನ್ನು ಕಚೇರಿಗೆ ಕರೆದುಕೊಂಡು ಬಂದು ಯಾವುದೋ ಒಂದು ಕೇಸಿನ ಬಗ್ಗೆ ಮಾತಾಡಿಕೊಂಡು ಹೋಗಿರುತ್ತಾರೆ, ಅದೇ ಕೇಸಿನ ವಿಚಾರವಾಗಿ ಮಾತನಾಡಲು ಮೂಕಾಂಬುರವರು ನೀಲ್ ಅವರ ಮೊಬೈಲ್ ನಂಬರ್ ಪಡೆದಕೊಂಡಿದ್ದು ನಂತರ ದೇವೆಂದ್ರ ಸುವರ್ಣ ಮೂಕಾಂಬುರವರೊಂದಿಗೆ ಅದೇ ಕಚೇರಿಗೆ ಆಗಮಿಸಿ ನೀಲ್ ಅವರನ್ನು ಉದ್ದೇಶಿಸಿ ನೀನು ನನಗೆ ಮತ್ತು ಮೂಕಾಂಬು ಅವರಿಗೆ ರೂ 50000 ಹಣವನ್ನು ನೀಡಬೇಕು ಇಲ್ಲವಾದಲ್ಲಿ “ಗ್ರಾಫಿಕ್ಸ್” ತಂತ್ರಜ್ಞಾನ ಬಳಸಿ ನೀನು ಮೂಕಾಂಬಿಕಾ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಿಯಾ ಎಂದು ಸುಳ್ಳು ಪ್ರಕರಣವನ್ನು ದಾಖಲಿಸಿ ನಿನ್ನ ಮಾನ ಮರ್ಯಾದೆ ತೆಗೆಯುವುದಾಗಿ ಹೆದರಿಸಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅಲ್ಲದೆ ನೀಲ್ ಅವರಿಗೆ ಇದೇ ರೀತಿ ಪದೇ ಪದೇ ಭಯ ಹುಟ್ಟಿಸಿ ಅವಮಾನ ಪಡಿಸುವುದಾಗಿ ಹೆದರಿಸಿ ಅಲ್ಲದೆ ಗೂಂಡಾಗಳನ್ನು ಬಳಸಿ ಕೊಲ್ಲಿಸುವುದಾಗಿ ಹೆದರಿಸಿ ರೂ 18000/- ಹಣವನ್ನು ಬಲಾತ್ಕಾರವಾಗಿ ವಸೂಲಿ ಮಾಡಿರುತ್ತಾರೆ, ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ದೂರು ಸ್ವೀಕರಿಸಿರುವ ಕೋಟ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...