ವಿಟ್ಲ ಗ್ಯಾಂಗ್‌ನಿಂದ ಹನಿಟ್ರ್ಯಾಪ್, ಸಂತ್ರಸ್ತನಿಗೆ ನಿರಂತರ ಬೆದರಿಕೆ ಕರೆ: ಗಲ್ಫ್ ಉದ್ಯಮಿಯಿಂದ ದೂರು ದಾಖಲು

Date:

ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ನಡೆಸಿದ ಬಂಟ್ವಾಳ ಮೂಲದ ತಂಡವೊಂದು ಆತನಿಂದ 45 ಲಕ್ಷ ರೂಪಾಯಿಗೂ ಅಧಿಕ ಹಣ ಸುಲಿಗೆ ಮಾಡಿದ ಬಗ್ಗೆ, ಏಳು ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಸಂತ್ರಸ್ತನಿಗೆ ಆರೋಪಿಗಳಿಂದ ನಿರಂತರ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆಯೂ ಗಲ್ಫ್ ಉದ್ಯಮಿ ಕೇರಳದ ತಾವರಕಡನ್ ಮೂಲದ ಮಹಮ್ಮದ್ ಅಶ್ರಫ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

ರಿಯಾಝ್, ಮುಸ್ತಫಾ ಬಂದರ್, ಸಫಿಯಾ ಮಾಣಿ, ಸರಪುದ್ದೀನ್, ವಿಟ್ಲ ಹಸೈನಾರ್ ವಿರುದ್ಧ ಸಂತ್ರಸ್ತ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂತ್ರಸ್ತ ನೀಡಿರುವ ದೂರಿನಲ್ಲಿ, “ನನ್ನ ಫೋನ್ ನಂಬರ್‌ಗೆ ಬೇರೆ ಬೇರೆ ವ್ಯಕ್ತಿಗಳು ಕರೆ ಮಾಡಿ, ʼಈ ಪ್ರಕರಣದಿಂದ ಆರೋಪಿಗಳನ್ನು ಕೈಬಿಡಬೇಕು, ನಿಮ್ಮನ್ನು ನಾವು ಹೊರಗಡೆ ನೋಡಿಕೊಳ್ಳುತ್ತೇವೆ, ಆರೋಪಿಗಳನ್ನು ಕೈ ಬಿಡಿ ಅವರು ಮುಗ್ಧರುʼ ಎನ್ನುವಂತಹ ಬೆದರಿಕೆ ಕರೆಗಳು ಬರುತ್ತಿವೆ” ಎಂದು ಉಲ್ಲೇಖಿಸಿದ್ದಾರೆ.

ದೂರು ಪ್ರತಿ 1

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ತಾಲ್ಲೂಕು ಆಡಳಿತ ಸಜ್ಜು

“ಸೇಫಿಯಾ ಮಾಣಿ ಎಂಬ ಆರೋಪಿ ಈ ರೀತಿ ಕರೆ ಮಾಡಿ, ʼಕೇಸ್ ವಾಪಸ್‌ ಪಡೆಯದಿದ್ದರೆ ವೀಡಿಯೋ, ಫೋಟೋ ಅವರ ಜಮಾತಿಗೆ ಅವರ ಪತ್ನಿ ಸಂಬಂಧಿಕರಿಗೆ ನೀಡುತ್ತೇನೆʼ ಎಂದು ಬೆದರಿಸಿದ್ದು, ಬಳಿಕ ನನ್ನ ಸಹೋದರನಿಗೆ ಕರೆ ಮಾಡಿ ಕಳುಹಿಸಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ನನ್ನ ಸಹೋದರ ಕೇರಳದಲ್ಲಿ ದೂರು ನೀಡಿದ್ದು, ನನಗೆ ಈ ಮೇಲಿನ ನಂಬರ್‌ನಿಂದ ಬೆದರಿಕೆ ಕರೆ ಬರುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ರಕ್ಷಣೆ ನೀಡಬೇಕು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...