ಹೊನ್ನಾವರ | ವಿದ್ಯತ್‌ ಅವಘಡ; ದಂಪತಿ ಸಾವು!

Date:

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆರಂಭವಾಗುವ ಮುನ್ನಾ ದಿನವೇ ಕರಾವಳಿ ಭಾಗದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಬಟ್ಟೆ ವಿನಾಯಕ ಕೇರಿ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.

- Advertisement -

ಮೃತರನ್ನು ಸಂತೋಷ ಗೌಡ ಹಾಗೂ ಅವರ ಪತ್ನಿ ಶೀತು ಗೌಡ ಎಂದು ಗುರುತಿಸಲಾಗಿದೆ. ಮನೆಯ ಬಳಿಯಿಂದ ಹಾದು ಹೋಗುತ್ತಿದ್ದ ವಿದ್ಯುತ್ ಲೈನ್ ಆಕಸ್ಮಿಕವಾಗಿ ಹರಿದು ಬಿದ್ದ ಪರಿಣಾಮ, ಈ ದಂಪತಿಗೆ ತೀವ್ರ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಮತ್ತು ಬಂಧುಗಳು ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೆಯ ಹಾಗೂ ಅಪಾಯಕಾರಿ ವಿದ್ಯುತ್ ಲೈನ್‌ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿರುವುದೇ ಈ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...
WhatsApp Image 2025 10 20 at 1.23.07 PM

ದಂಪತಿಯ ಮೃತದೇಹಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದರೂ, ಸ್ಥಳೀಯರು ಮತ್ತು ಕುಟುಂಬ ವರ್ಗದವರು, “ದುರ್ಘಟನೆಗೆ ಕಾರಣರಾದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನ್ಯಾಯ ಸಿಗುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕುಮಟಾ | ‘ಅಂದರ್-ಬಾಹರ್’ ಆಟಕ್ಕೆ ಅನುಮತಿ ನೀಡುವಂತೆ ಬೇಡಿಕೆ; ನೀಡದಿದ್ದರೆ ಹೋರಾಟದ ಎಚ್ಚರಿಕೆ!

ಬೆಳಕಿನ ಹಬ್ಬದ ದಿನವೇ ಸಂಭವಿಸಿದ ಈ ದುರಂತದಿಂದಾಗಿ ಕಾಸರಕೋಡ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತ ಸಂತೋಷ ಗೌಡ ಮತ್ತು ಶೀತು ಗೌಡ ದಂಪತಿಗೆ ಇಬ್ಬರು ಪುತ್ರರಿದ್ದಾರೆ. ದುಃಖತಪ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯ ಹೆಚ್ಚಾಗಿದೆ. ಸ್ಥಳೀಯ ಪೊಲೀಸರು ಘಟನೆ ಕುರಿತು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...