ಹೊನ್ನಾವರ | ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

Date:

ಹೊನ್ನಾವರ: ಬೆಂಗಳೂರಿನಿಂದ ಭಟ್ಕಳದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ ಒಂದು ಭೀಕರ ರಸ್ತೆ ಅಪಘಾತಕ್ಕೊಳಗಾಗಿ ಪಲ್ಟಿಯಾದ ದುರ್ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

- Advertisement -

ಪ್ರಾಥಮಿಕ ಮಾಹಿತಿಯ ಪ್ರಕಾರ, ನಿಯಂತ್ರಣ ತಪ್ಪಿದ ಕಾರೊಂದು ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರು ಇದ್ದರೆಂದು ತಿಳಿದುಬಂದಿದೆ. ಗಾಯಾಳುಗಳನ್ನು 108 ಹಾಗೂ ಖಾಸಗಿ ಆಂಬುಲೆನ್ಸ್‌ಗಳ ಮೂಲಕ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತ ಸ್ಥಳದಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ ? 12 ಗಂಟೆ ಹೋರಾಡಿ ಆ್ಯಂಬುಲೆನ್ಸ್‌ನಲ್ಲೇ ಅಂತ್ಯ ಕಂಡ ಬಡ ಕಾರ್ಮಿಕ; ಇದೇನಾ ಆರೋಗ್ಯ ವ್ಯವಸ್ಥೆಯ ನಿಜಮುಖ?

ಗೇರುಸೊಪ್ಪ ಘಟ್ಟ ಪ್ರದೇಶವು ಹೊನ್ನಾವರದಿಂದ 40 ಕಿ.ಮೀ. ಹಾಗೂ ಸಿದ್ದಾಪುರದಿಂದ 30 ಕಿ.ಮೀ. ದೂರದಲ್ಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯಗಳು ಕೊರತೆಯಿರುವುದರಿಂದ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಸಿಗದೆ ಪರಿದಾಡುವಂತೆ ಆಯಿತು.

ಅಪಘಾತದಿಂದ ಹೊನ್ನಾವರ–ಬೆಂಗಳೂರು ಹೆದ್ದಾರಿ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು. ಈಗ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ವ್ಯವಸ್ಥೆಯನ್ನು ಸರಿಪಡಿಸಿದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...