ಹೊನ್ನಾವರ | ₹1.31 ಕೋಟಿ ವೆಚ್ಚದ 8 ರಸ್ತೆ ಕಾಮಗಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ

Date:

ಹೊನ್ನಾವರ: ಪಟ್ಟಣದ ವಿವಿಧ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಒಟ್ಟು ₹1.31 ಕೋಟಿ ವೆಚ್ಚದ 8 ರಸ್ತೆ ಕಾಮಗಾರಿಗಳಿಗೆ ಕುಮಟಾ–ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ ಚಾಲನೆ ನೀಡಿದರು.

- Advertisement -

ರಾಮತೀರ್ಥ ಕ್ರಾಸ್–ವಡಗೇರಿ ರಸ್ತೆ, ಸುವಿಧಾ ಆಸ್ಪತ್ರೆ ಸಂಪರ್ಕ ರಸ್ತೆ, ಬಾಂದೆಹಳ್ಳ, ಸೆಂಟ್ ಥಾಮಸ್ ಪ್ರೌಢಶಾಲೆ ಮುಂಭಾಗ, ಲಕ್ಷ್ಮೀನಾರಾಯಣ ನಗರ, ಮೂರುಕಟ್ಟೆ, ಸರ್ಪಿ ಸೆಂಟರ್ ಹಾಗೂ ಬಜಾರ್ ರಸ್ತೆಯಲ್ಲಿ ಕಾಮಗಾರಿಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಶಾಸಕ ದಿನಕರ ಶೆಟ್ಟಿ, ಕಳೆದ ಕೆಲವು ವರ್ಷಗಳಿಂದ ಸರ್ಕಾರದ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗಿದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ನಿರೀಕ್ಷಿತ ವೇಗ ದೊರೆತಿರಲಿಲ್ಲ. ಇತ್ತೀಚೆಗೆ ಕ್ಷೇತ್ರಕ್ಕೆ ಮಂಜೂರಾದ ₹25 ಕೋಟಿ ಅನುದಾನದಲ್ಲಿ ₹1.31 ಕೋಟಿಯನ್ನು ಹೊನ್ನಾವರ ಪಟ್ಟಣದ ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಳಿಯಾಳ | ವರ್ಗಾವಣೆ ಕಮಿಷನ್, ‘ಮಂತ್ಲಿ ಹಪ್ತಾ’ ಕುರಿತ ಆಡಿಯೋ ವೈರಲ್: ಮೂವರು ಪಿಎಸ್‌ಐ ಅಮಾನತು

ಈ ಹಿಂದೆ ಶಾಸಕರ ನಿಧಿಯ ಮೂಲಕವೂ ಪಟ್ಟಣದ ಹಲವು ಭಾಗಗಳಲ್ಲಿ 25ಕ್ಕೂ ಹೆಚ್ಚು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಖ್ಯಮಂತ್ರಿ ಅವರು ಹೊನ್ನಾವರ ಪಟ್ಟಣದ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದು, ಒಟ್ಟು ₹2 ಕೋಟಿ ಅನುದಾನದ ಪೈಕಿ ₹1 ಕೋಟಿಯನ್ನು ರಸ್ತೆ ಅಭಿವೃದ್ಧಿಗೆ ಬಳಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಅಂಕೋಲಾ ಪುರಸಭೆ, ಮಂಕಿ ಪಟ್ಟಣ ಪಂಚಾಯಿತಿ ಮತ್ತು ಹೊನ್ನಾವರ ಪಟ್ಟಣ ಪಂಚಾಯಿತಿಗಳ ಕಾಮಗಾರಿಗಳ ಮೇಲ್ವಿಚಾರಣೆಗೆ ಒಬ್ಬರೇ ಇಂಜಿನಿಯರ್ ಇರುವುದರಿಂದ ಕೆಲಸಗಳ ನಿರ್ವಹಣೆಯಲ್ಲಿ ಕೆಲ ತೊಂದರೆಗಳು ಎದುರಾಗುತ್ತಿವೆ. ಮಳೆಗಾಲ ಮುಗಿದ ನಂತರ ಡಾಂಬರೀಕರಣಕ್ಕೆ ಸಂಬಂಧಿಸಿದ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಶೆಟ್ಟಿ ಹೇಳಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯೇಸು ಬೆಂಗಳೂರು, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಎಂ.ಎಸ್. ನಾಯ್ಕ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶಿವರಾಜ ಮೇಸ್ತ, ನಾಗರಾಜ ಭಟ್, ವಿಜಯ ಕಾಮತ್, ಮಾಜಿ ಸದಸ್ಯರು, ಬಿಜೆಪಿ ಮಂಡಲ ಅಧ್ಯಕ್ಷ ಯೋಗೀಶ ಮೇಸ್ತ, ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಘವ ಬಾಳೇರಿ, ಯಧುವೀರ ಕೋ-ಆಪರೇಟಿವ್ ಅಧ್ಯಕ್ಷ ಶ್ರೀಕಾಂತ ನಾಯ್ಕ, ಬಿಜೆಪಿ ಮುಖಂಡರಾದ ರಾಜೇಶ ಭಂಡಾರಿ, ರವಿ ನಾಯ್ಕ ರಾಯಲಕೇರಿ, ಎಂ.ಎಸ್. ಹೆಗಡೆ ಕಣ್ಣಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...