ಹೊನ್ನಾವರ | ಅಂಪೈರ್ ತೀರ್ಪಿಗೆ ಆಕ್ಷೇಪ: ಜಗಳ ಬಿಡಿಸಲು ಹೋದ ವೃದ್ಧ ರೈತನ ಮೇಲೆ ಬ್ಯಾಟ್‌ನಿಂದ ಹಲ್ಲೆ

Date:

ಹೊನ್ನಾವರ: ತಾಲೂಕಿನ ಖರ್ವಾ ಗ್ರಾಮದ ವಲ್ಕಿ ಪ್ರದೇಶದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ಅಂಪೈರ್ ತೀರ್ಪಿನ ವಿಚಾರವಾಗಿ ಉಂಟಾದ ಜಗಳವು ವಿಕೋಪಕ್ಕೆ ತಿರುಗಿ, ಮಧ್ಯಪ್ರವೇಶಿಸಿದ ವೃದ್ಧರೊಬ್ಬರ ಮೇಲೆ ಬ್ಯಾಟ್‌ನಿಂದ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ವಲ್ಕಿ ನಿವಾಸಿ, 58 ವರ್ಷದ ರೈತ ಶೇಖ್ ಮಹಮ್ಮದ್ ಜುಬೇರ ಹಲ್ಲೆಗೊಳಗಾದವರು. ಮಂಗಳವಾರ (ಮೇ 5) ಸಂಜೆ ಕೊಳಗದ್ದೆ ಶಾಲಾ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಯ ವಿವರ: ಪಂದ್ಯದ ವೇಳೆ ಅಬ್ದುಲ್ ರೆಹಮಾನ್ ಎಂಬ ಆಟಗಾರ ಔಟ್ ಎಂದು ಅಂಪೈರ್ ತೀರ್ಪು ನೀಡಿದ್ದರು. ಈ ನಿರ್ಧಾರವನ್ನು ಒಪ್ಪದ ಸುಬಾನ್ ಖಾಜಾ ಫಕರ್ದೀನ್ (24) ಮತ್ತು ಮೇಹದಿ ಖಾಜಾ ಫಕರ್ದೀನ್ (21) ಎಂಬ ಯುವಕರು ಮೈದಾನದಲ್ಲೇ ಅಂಪೈರ್ ಜೊತೆ ಕಿರಿಕ್ ಶುರು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | 73 ಹೊಸ ನ್ಯಾಯಬೆಲೆ ಅಂಗಡಿಗಳ ಸ್ಥಾಪನೆಗೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆ

ಮಾತಿನ ಚಕಮಕಿ ಜೋರಾಗಿದ್ದನ್ನು ಗಮನಿಸಿದ ಶೇಖ್ ಮಹಮ್ಮದ್ ಜುಬೇರ ಅವರು, ಜಗಳ ಶಾಂತಗೊಳಿಸಲು ಪ್ರಯತ್ನಿಸಿ ಯುವಕರಿಗೆ ಬುದ್ಧಿವಾದ ಹೇಳಿದ್ದಾರೆ. “ಅಂಪೈರ್ ತೀರ್ಪು ಸರಿಯಾಗಿದೆ, ಸುಮ್ಮನೆ ಗಲಾಟೆ ಮಾಡಬೇಡಿ” ಎಂದು ಹೇಳಿದ್ದೇ ಆರೋಪಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಅಂಪೈರ್ ಮೇಲಿದ್ದ ಕೋಪವನ್ನು ಜುಬೇರ ಅವರ ಮೇಲೆ ತಿರುಗಿಸಿದ ಆರೋಪಿಗಳು, ಏಕಾಏಕಿ ಕ್ರಿಕೆಟ್ ಬ್ಯಾಟ್‌ಗಳಿಂದ ಅವರ ಮೇಲೆ ದಾಳಿ ನಡೆಸಿದ್ದಾರೆ. ಸುಬಾನ್ ಎಂಬಾತ ಬ್ಯಾಟ್‌ನಿಂದ ಜುಬೇರ ಅವರ ತಲೆಗೆ ಬಲವಾಗಿ ಹೊಡೆದರೆ, ಮೇಹದಿ ಬೆನ್ನಿನ ಭಾಗಕ್ಕೆ ಹೊಡೆದು ತೀವ್ರವಾಗಿ ಗಾಯಗೊಳಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಹಲ್ಲೆಗೊಳಗಾದ ಜುಬೇರ ಅವರು ನೀಡಿದ ದೂರಿನನ್ವಯ ಹೊನ್ನಾವರ ಪೊಲೀಸರು ಆರೋಪಿಗಳ ವಿರುದ್ಧ ಬಿಎನ್‌ಎಸ್ ಕಲಂ 118(1), 352 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...