ಹೊನ್ನಾವರ | ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: 17 ಲಕ್ಷ ರೂ. ಕಳೆದುಕೊಂಡ ಮಹಿಳೆ

Date:

ಹೊನ್ನಾವರ: ಸಾಮಾಜಿಕ ಜಾಲತಾಣದಲ್ಲಿ ಬರುವ ಆಕರ್ಷಕ ಜಾಹೀರಾತುಗಳನ್ನು ನಂಬಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಆನ್‌ಲೈನ್ ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 17,10,921 ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಘಟನೆಯ ವಿವರ: ಹೊನ್ನಾವರ ತಾಲ್ಲೂಕಿನ ದಿವ್ಯಾ ಸುಕ್ರು ಗೌಡ ಎಂಬ ಮಹಿಳೆ ನವೆಂಬರ್ 27, 2025 ರಂದು ಇನ್‌ಸ್ಟಾಗ್ರಾಂನಲ್ಲಿ ‘Online Part Time Job’ ಎಂಬ ಜಾಹೀರಾತನ್ನು ನೋಡಿ, ಅಲ್ಲಿ ನೀಡಲಾಗಿದ್ದ ಲಿಂಕ್ ಕ್ಲಿಕ್ ಮಾಡಿದ್ದಾರೆ. ಇದು Konal Poddar ಎಂಬುವವರ ವಾಟ್ಸಾಪ್ ಸಂಖ್ಯೆಗೆ ಇವರನ್ನು ಸಂಪರ್ಕಿಸುವಂತೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕೆಲಸದ ಬಗ್ಗೆ ಆಸಕ್ತಿ ತೋರಿದ ಸಂತ್ರಸ್ತರಿಗೆ ಟೆಲಿಗ್ರಾಂ ಐಡಿ ಮತ್ತು ವೆಬ್‌ಸೈಟ್ ಲಿಂಕ್‌ಗಳನ್ನು ನೀಡಿ ಪ್ರಾಡಕ್ಟ್ ರೇಟಿಂಗ್ ಮತ್ತು ರಿವ್ಯೂ ನೀಡುವ ಕೆಲಸವನ್ನು ವಹಿಸಲಾಗಿದೆ. ಆರಂಭದಲ್ಲಿ ಸಂತ್ರಸ್ತರ ವಿಶ್ವಾಸ ಗಳಿಸಲು ವಂಚಕರು ಸಣ್ಣ ಮೊತ್ತದ ಹೂಡಿಕೆ ಮಾಡಿಸಿದ್ದಾರೆ. ಮೊದಲು 800 ರೂ. ಹೂಡಿಕೆ ಮಾಡಿದಾಗ 1,000 ರೂ.ಗಳನ್ನು ಹಾಗೂ 3,000 ರೂ. ಹೂಡಿಕೆ ಮಾಡಿದಾಗ 3,900 ರೂ.ಗಳನ್ನು ಸಂತ್ರಸ್ತರ ಖಾತೆಗೆ ಜಮಾ ಮಾಡುವ ಮೂಲಕ ನಂಬಿಕೆ ಹುಟ್ಟಿಸಿ.

ಹೆಚ್ಚಿನ ಲಾಭದ ಆಸೆ ತೋರಿಸಲು ‘Glory Community’ ಎಂಬ ಟೆಲಿಗ್ರಾಂ ಗ್ರೂಪ್‌ಗೆ ಸೇರಿಸಲಾಗಿದ್ದು, ಅಲ್ಲಿ ಧರಂ ಚೌಧರಿ, ರೆಯಾನ್ಶಿ ದೇಶ್ಮುಖ್ ಮತ್ತು ವಿಕ್ರಮ್ ಸಿಂಗ್ ಎಂಬುವವರು ಅಡ್ಮಿನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಹೆಚ್ಚಿನ ಲಾಭದ ಆಸೆಗೆ ಬಿದ್ದ ಸಂತ್ರಸ್ತರು, ನವೆಂಬರ್ 29 ರಿಂದ ಡಿಸೆಂಬರ್ 20 ರವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 17,10,921 ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಆದರೆ ಹಣ ಪಾವತಿಸಿದ ನಂತರ ಯಾವುದೇ ಲಾಭಾಂಶವಾಗಲಿ ಅಥವಾ ಹೂಡಿಕೆ ಮಾಡಿದ ಅಸಲು ಹಣವಾಗಲಿ ವಾಪಸ್ ಬಂದಿಲ್ಲ. ತಾವು ವಂಚನೆಗೆ ಒಳಗಾಗಿರುವುದು ತಡವಾಗಿ ಅರಿವಿಗೆ ಬಂದ ಕೂಡಲೇ ಸಂತ್ರಸ್ತರು ಕಾರವಾರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...