ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

Date:

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ ಮಂಧಾನ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಬಂಗಾರಮಕ್ಕಿಗೆ ಭೇಟಿ ನೀಡಿ, ಶ್ರೀ ವೀರಾಂಜನೇಯ ಸ್ವಾಮಿಯ ದರ್ಶನ ಪಡೆದರು.

- Advertisement -

ಕ್ರಿಕೆಟ್ ಮೈದಾನದಲ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಕೌಶಲ್ಯದಿಂದ ದೇಶದ ಗಮನ ಸೆಳೆದಿರುವ ಸ್ಮೃತಿ ಮಂಧಾನ ಅವರು, ಶ್ರೀಕ್ಷೇತ್ರಕ್ಕೆ ಭೇಟಿ ನೀಡುವ ಮೂಲಕ ಭಕ್ತಿಭಾವ ಮೆರೆದರು. ಬಂಗಾರಮಕ್ಕಿಗೆ ಆಗಮಿಸಿದ ಅವರನ್ನು ಕ್ಷೇತ್ರದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಈ ಸುದ್ದಿ ಓದಿದ್ದೀರಾ? ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಈ ಸಂದರ್ಭದಲ್ಲಿ ಸ್ಮೃತಿ ಮಂಧಾನ ಅವರು ಶ್ರೀ ವೀರಾಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿ, ದೇವರ ದರ್ಶನ ಪಡೆದರು. ಬಳಿಕ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಸ್ಮೃತಿ ಮಂಧಾನ ಅವರ ಶ್ರೀಕ್ಷೇತ್ರ ಭೇಟಿ ಭಕ್ತರು ಹಾಗೂ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು. ಕ್ರೀಡಾ ಸಾಧನೆಯ ಜೊತೆಗೆ ಆಧ್ಯಾತ್ಮಿಕ ಕ್ಷೇತ್ರದತ್ತವೂ ಒಲವು ತೋರಿದ ಅವರ ಭೇಟಿ ವಿಶೇಷವಾಗಿತ್ತು.

ದೇಶದಾದ್ಯಂತ ತಮ್ಮ ಕ್ರೀಡಾ ಸಾಧನೆಯ ಮೂಲಕ ಅಭಿಮಾನಿಗಳ ಪ್ರೀತಿ ಗಳಿಸಿರುವ ಸ್ಮೃತಿ ಮಂಧಾನ ಅವರು, ಶ್ರೀ ವೀರಾಂಜನೇಯ ಸ್ವಾಮಿಯ ದರ್ಶನ ಹಾಗೂ ಮಾರುತಿ ಗುರೂಜಿಯವರ ಆಶೀರ್ವಾದ ಪಡೆದ ಬಳಿಕ ಶ್ರೀಕ್ಷೇತ್ರದಿಂದ ನಿರ್ಗಮಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...