ಹೊನ್ನಾವರ | ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು; ಪತ್ನಿ ಹತ್ಯೆ ಆರೋಪದಲ್ಲಿ ಪತಿ ಬಂಧನ

Date:

ಹೊನ್ನಾವರ: ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂದದಲ್ಲಿ 27 ವರ್ಷದ ವಿವಾಹಿತೆ ಮೃತಪಟ್ಟಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಅಸಹಜ ಸಾವು ಎಂದು ದಾಖಲಾಗಿದ್ದ ಪ್ರಕರಣದ ತನಿಖೆ ಮುಂದುವರಿದಂತೆ, ಮಹಿಳೆಯ ಸಾವಿನ ಹಿಂದೆ ಕೊಲೆ ನಡೆದಿರುವ ಶಂಕೆ ದೃಢಪಟ್ಟಿದ್ದು, ಪೊಲೀಸರು ಆಕೆಯ ಪತಿಯನ್ನು ಬಂಧಿಸಿದ್ದಾರೆ.

- Advertisement -

ಮೃತರನ್ನು ಜೋಯಿಡಾ ತಾಲೂಕಿನ ನಂದಿಗದ್ದೆ ನಿವಾಸಿ ಹರಿಶ್ಚಂದ್ರ ದೇಸಾಯಿ ಅವರ ಪುತ್ರಿ ಹಾಗೂ ದೊಡ್ಡಗುಂದದ ನಿವಾಸಿ ಮಂಗಳಾ ನಾಯ್ಕ (27) ಎಂದು ಗುರುತಿಸಲಾಗಿದೆ. ಆಗಸ್ಟ್ 25ರಂದು ಮಂಗಳಾ ಮೃತಪಟ್ಟಿದ್ದರು. ಬೆಳಗಿನ ಜಾವ ರಕ್ತ ವಾಂತಿ ಮಾಡಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ಪತಿ ಗಣಪತಿ ನಾಯ್ಕ ಪೊಲೀಸರಿಗೆ ಮಾಹಿತಿ ನೀಡಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಹಿನ್ನೆಲೆಯಲ್ಲಿ ಮೊದಲಿಗೆ ಮಂಕಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಆದರೆ ಮಂಗಲಾ ಸಾವಿನ ಕುರಿತು ಆಕೆಯ ತವರು ಮನೆಯವರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದಾಗ, ಇದು ಅಸಹಜ ಸಾವಲ್ಲ, ಕೊಲೆ ಪ್ರಕರಣವಾಗಿರಬಹುದೆಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸ್ಥಳೀಯ ಐಟಿಐಗಳೊಂದಿಗೆ ನೌಕಾ ಡಾಕ್‌ಯಾರ್ಡ್‌ ಒಪ್ಪಂದ

ಮೃತಳ ಸಹೋದರಿ ಲಲಿತಾ ಸಚಿನ್ ಗುಂಜಿಕರ್ ನೀಡಿರುವ ದೂರಿನ ಪ್ರಕಾರ, ಮನೆಯಲ್ಲಿ ಮಂಗಲಾ ಮೇಲೆ ಆಕೆಯ ಪತಿ ಗಣಪತಿ ಮಂಜುನಾಥ ನಾಯ್ಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಲ್ಲೆಯಿಂದಲೇ ಮಂಗಲಾ ಮೃತಪಟ್ಟಿದ್ದಾರೆ ಎಂಬ ಆರೋಪವನ್ನು ದೂರಿನಲ್ಲಿ ಮಾಡಲಾಗಿದೆ.

ಮಂಗಲಾ ಮತ್ತು ಗಣಪತಿ ಸುಮಾರು ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಗಣಪತಿ ಸಾಲ ಮಾಡಿಕೊಳ್ಳುವುದು, ಮದ್ಯಪಾನ ಮಾಡುವುದು ಹಾಗೂ ಹಣವನ್ನು ದುಂದು ವೆಚ್ಚ ಮಾಡುತ್ತಿರುವುದನ್ನು ಮಂಗಲಾ ಪ್ರಶ್ನಿಸುತ್ತಿದ್ದಳು. ಈ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಮನಸ್ತಾಪ ಮತ್ತು ಜಗಳ ನಡೆಯುತ್ತಿತ್ತು. ಗಣಪತಿ ಈ ಹಿಂದೆ ಕೂಡ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಹಾಗೂ ಆಕೆಯನ್ನು ಕೊಲ್ಲಲು ಪ್ರಯತ್ನಿಸಿದ್ದ ಎಂಬ ಆರೋಪವನ್ನು ಮೃತಳ ಕುಟುಂಬದವರು ಮಾಡಿದ್ದಾರೆ.

ತನಿಖೆಯ ವೇಳೆ ಪ್ರಕರಣ ಕೊಲೆ ಎಂಬ ಅನುಮಾನಕ್ಕೆ ಬಲ ಸಿಕ್ಕ ಹಿನ್ನೆಲೆಯಲ್ಲಿ, ಆಗಸ್ಟ್ 26ರಂದು ಮೃತಳ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಮಂಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಯಿತು. ಪ್ರಕರಣದ ತನಿಖೆಯನ್ನು ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ ಹಂಚಿನಾಳ ಅವರು ಕೈಗೊಂಡಿದ್ದು, ಆರೋಪಿಯನ್ನು ಪತ್ತೆಹಚ್ಚಲು ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಕುಮಾರ ಕಾಂಬಳೆ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಕಾರ್ಯಾಚರಣೆ ನಡೆಸಿದ ಪೊಲೀಸರು ದೊಡ್ಡಗುಂದ ನಿವಾಸಿ ಹಾಗೂ ಆಟೋ ಚಾಲಕನಾಗಿರುವ ಗಣಪತಿ ನಾಯ್ಕ (38)ನನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಭಟ್ಕಳ ಉಪವಿಭಾಗದ ಡಿವೈಎಸ್ಪಿ ಗಿರೀಶ ಬಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ ಹಂಚಿನಾಳ ಅವರ ನೇತೃತ್ವದಲ್ಲಿ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪಿಎಸ್ಐ ಕುಮಾರ ಕಾಂಬಳೆ, ಎಎಸ್ಐಗಳಾದ ಪರಮೇಶ್ವರ ಮಾಳೇಕರ ಮತ್ತು ಕಿರಣ ವೈದ್ಯ ಸೇರಿದಂತೆ ಮಂಕಿ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಪ್ರಕರಣದ ಕುರಿತು ಪೊಲೀಸರು ಇನ್ನೂ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...