ಹೊನ್ನಾವರ | ಕಟ್ಟಡ ಕಾಮಗಾರಿ ಸಾಮಾಗ್ರಿಗಳ ಹೊತ್ತೊಯ್ದಿದ್ದ ಕಳ್ಳರ ಬಂಧನ

Date:

ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳನ್ನು ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತು ವಶಪಡಿಸಿಕೊಂಡಿದ್ದಾರೆ.

- Advertisement -

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತವೀರ ಅಹಮ್ಮದ್, ಷಹಾದ್-ಉಲ್ಲಾ, ಮಹ್ಮದ್ ಮನ್ಸೂರ್ ಮತ್ತು ಕಲೀಮುಲ್ಲಾ ಅಲಿಯಾಸ್ ಕಲೀಂ ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಕಳೆದ ತಿಂಗಳು ಕಾಸರಕೋಡ ರೋಷನ್ ಮೊಹಲ್ಲಾದಲ್ಲಿನ ಮಸೀದಿ ಹತ್ತಿರ ನಿರ್ಮಾಣವಾಗುತ್ತಿದ್ದ ಕಟ್ಟಡವೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳು ಕಳುವಾಗಿತ್ತು. ಜುಲೈ 15ರ ರಾತ್ರಿ 7 ಗಂಟೆಯಿಂದ ಜುಲೈ 16ರ ಬೆಳಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ ಈ ಕೃತ್ಯ ನಡೆದಿತ್ತು. ಈ ಬಗ್ಗೆ ರಾಮ ಲಕ್ಷ್ಮಣ ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ತಾಂತ್ರಿಕ ಹಾಗೂ ಖಚಿತ ಮಾಹಿತಿಯ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹2 ಲಕ್ಷ ಮೌಲ್ಯದ 180 ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕಳ್ಳತನವನ್ನು ಒಪ್ಪಿಕೊಂಡಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಹೊನ್ನಾವರ | ಸಾರಿಗೆ ನೌಕರರ ಮುಷ್ಕರ: ತಹಶೀಲ್ದಾರ್‌ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಸಭೆ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ. ಕೃಷ್ಣಮೂರ್ತಿ ಮತ್ತು ಎಂ. ಜಗದೀಶ್, ಹಾಗೂ ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಮಹೇಶ ಕೆ, ಹೊನ್ನಾವರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಿದ್ದರಾಮೇಶ್ವರ ಎಸ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜಶೇಖರ ವಂದಲಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಜಾನನ ನಾಯ್ಕ, ವಿಠ್ಠಲ ಗೌಡ, ಮನೋಜ ಡಿ, ರವಿ ನಾಯ್ಕ, ಚಂದ್ರಶೇಖರ ನಾಯ್ಕ, ಅನಿಲ ಲಮಾಣಿ, ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ...