ಹೊನ್ನಾವರ | ಬಸ್ಸಿನಲ್ಲಿ ಚಿನ್ನಾಭರಣ ಕಳವು ಮಾಡಿದ ಮಹಿಳೆ ಬಂಧನ; ₹1 ಲಕ್ಷ ಮೌಲ್ಯದ ಸ್ವತ್ತು ವಶ

Date:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರೊಬ್ಬರ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದ ಮಹಿಳೆಯನ್ನು ಹೊನ್ನಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತೆಯಿಂದ ₹1,01,050 ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಹಳದಿಪುರದ ನಿವಾಸಿ ಬನಾಪ್ಪ ಶಾರೀಕ್ ಶೇಖ್ ಅವರು ಅ. 4ರಂದು ಮಧ್ಯಾಹ್ನ 2:30ರ ಸುಮಾರಿಗೆ ಹೊನ್ನಾವರದ ಶರಾವತಿ ಸರ್ಕಲ್‌ನಲ್ಲಿ ಹಳದಿಪುರಕ್ಕೆ ತೆರಳಲು ಬಸ್ ಹತ್ತುತ್ತಿದ್ದಾಗ ಕಳ್ಳತನ ನಡೆದಿದೆ. ಬಸ್ ಹತ್ತುವ ವೇಳೆ ಅವರ ಬ್ಯಾಗಿನ ಜಿಪ್ ತೆರೆದು ಅದರೊಳಗಿನ ಚಿಕ್ಕ ಪರ್ಸ್ ಕಳವುಗೊಂಡಿತ್ತು. ಆ ಪರ್ಸ್‌ನಲ್ಲಿ ₹80,000 ಮೌಲ್ಯದ ಬಂಗಾರದ ಚೈನ್, ₹8,000 ಮೌಲ್ಯದ ಬಂಗಾರದ ಕಿವಿಯೋಲೆ ಹಾಗೂ ₹8,000 ನಗದು ಸೇರಿ ಒಟ್ಟು ₹96,000 ಮೌಲ್ಯದ ಸ್ವತ್ತು ಇತ್ತು. ಈ ಕುರಿತು ಬನಾಪ್ಪ ಅವರು ನೀಡಿದ ದೂರಿನ ಮೇರೆಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ? ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮ ಘಟ್ಟಕ್ಕೆ ಕೊಡಲಿ ಪೆಟ್ಟು; 3.5 ಲಕ್ಷ ಮರಗಳ ಮಾರಣಹೋಮಕ್ಕೆ ಸಿದ್ಧತೆ

ಕಳವು ಪ್ರಕರಣದ ತನಿಖೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ತಂಡವನ್ನು ರಚಿಸಿತ್ತು. ತನಿಖೆ ಮುಂದುವರಿಸಿದ ವೇಳೆ ಅ.5ರಂದು ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಆಧಾರದ ಮೇಲೆ ಕುಮಟಾ ತಾಲೂಕು ಮಿರ್ಜಾನ್‌ನ ತಾರಿಬಾಗಿಲು ನಿವಾಸಿ ದೀಪಾ ಬೊಮ್ಮಯ್ಯ ಅಂಬಿಗ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಆರೋಪಿತೆ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಆಕೆಯಿಂದ ಕಳವು ಮಾಡಿದ್ದ ಚಿನ್ನಾಭರಣ ಹಾಗೂ ನಗದು ಸೇರಿ ₹1,01,050 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...

ಯುವಜನತೆ ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಬೇಕು: ಹಜ್ರತ್ ಎಂ.ಪಿ. ಮುಜಮ್ಮಿಲ್ ಸಾಹೇಬ್ ಕರೆ

ಮೈಸೂರಿನ ಗೌಸಿಯಾ ನಗರದ ಉಸ್ಮಾನಿಯಾ ಬ್ಲಾಕ್‌ನ ನೌಜವಾನ್ ಕಮಿಟಿ ವತಿಯಿಂದ ಪ್ರತಿವರ್ಷದಂತೆ...

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...