ಮರ್ಯಾದೆಗೇಡು ಹತ್ಯೆ | ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ದುರುಳ ತಂದೆ

Date:

ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.

ಕವನಾ (20) ಹತ್ಯೆಯಾದ ಯುವತಿ. ಆರೋಪಿ ಮಂಜುನಾಥ್(47) ಮಗಳನ್ನೇ ಹತ್ಯೆಗೈದ ತಂದೆ. ಹಿರಿ ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನೇ ಕೊಲೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈತ ಕೋಳಿ ಅಂಗಡಿ ಇಟ್ಟುಕೊಂಡಿದ್ದನು.

ಆರೋಪಿ ಮಂಜುನಾಥ್‌ನ ಕಿರಿಯ ಮಗಳು ಪ್ರೀತಿ ಮಾಡಿ, ಪ್ರಿಯಕರನ ಜತೆಗೆ ಹೋಗುತ್ತೇನೆ ಎಂದು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಳು. ಈ ವೇಳೆ, ಪ್ರೀತಿಸಿದವನ ಜತೆಗೆ ಹೋಗುವುದಾಗಿ ಪಟ್ಟು ಹಿಡಿದಿದ್ದ ಆಕೆಯನ್ನು ಪೊಲೀಸರು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಘಟನೆ ಬಳಿಕ ಹಿರಿಯ ಮಗಳು ಕೂಡ ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿರುವ ವಿಚಾರ ತಿಳಿದ ತಂದೆ ಚಿಕ್ಕ ಮಗಳು ಮರ್ಯಾದೆ ಕಳೆದಳು, ಈಗ ನೀನು ಕಳೆಯುತ್ತಿರುವೆಯಾ ಎಂದು ಹಿರಿಯ ಮಗಳ ಜತೆಗೆ ಜಗಳವಾಡಿದ್ದಾನೆ. ನಂತರ ರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅ.12 ರಿಂದ ಸತತ ನಾಲ್ಕು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ನೋಡಿ

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಎಫ್‌ಐ ಒತ್ತಾಯ 

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಎಂಬುವವರ ಹತ್ಯೆ ವಿರೋಧಿಸಿ, ತಪ್ಪಿತಸ್ಥ...

ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ...

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...