BREAKING NEWS | ಧರ್ಮಸ್ಥಳದಲ್ಲಿ ಗೂಂಡಾಗಿರಿ: ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ

Date:

Advertisements

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ.

ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರ ಜೊತೆಗೆ, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ದಾಳಿ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದಾರೆ ಮತ್ತು ಎಲ್ಲರೂ ಈ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು ಒಬ್ಬರಿಗೆ ತೀವ್ರ ಗಾಯಗಳಾಗಿವೆ.

ಸೌಜನ್ಯ ಮನೆಯ ಪಾಂಗಳ ಕ್ರಾಸ್ ಸಮೀಪ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ದಾಳಿ ನಡೆಸಿದ ಗುಂಪಿನಲ್ಲಿ ಸುಮಾರು 50ರಿಂದ ನೂರು ಜನ ಇದ್ದರೆಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಸದ್ಯ ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Advertisements
WhatsApp Image 2025 08 06 at 6.21.52 PM

ಆಗಿದ್ದೇನು?

ಬಿಗ್‌ಬಾಸ್‌ ಕನ್ನಡ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ರಜತ್ ಎಂಬುವವರು ಇಂದು ವಕೀಲರ ಜೊತೆಗೆ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೊಳಗಾಗಿದ್ದ ಸೌಜನ್ಯ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ರಜತ್ ಬಂದಿರುವ ವಿಚಾರ ತಿಳಿದು ಯೂಟ್ಯೂಬರ್‌ಗಳು ಸಂದರ್ಶನ ನಡೆಸಲು ಆಗಮಿಸುವುದಾಗಿ ತಿಳಿಸಿದ್ದರು.

ಅದಾಗಲೇ ಸೌಜನ್ಯ ಮನೆಯಿಂದ ಹೊರಟಿದ್ದ ರಜತ್ ಅವರಿಗೆ ಸೌಜನ್ಯ ಮನೆಯ ಪಾಂಗಳ ಕ್ರಾಸ್ ಸಮೀಪ ಮಾತನಾಡಲು ಸಿಕ್ಕಿದ್ದಾರೆ. ಪಾಂಗಳ ಕ್ರಾಸ್ ಬಳಿಯಲ್ಲೇ ನಿಂತು ಸಂದರ್ಶನ ನಡೆಸುತ್ತಿದ್ದರು. ಇದೇ ವೇಳೆ ಸ್ಥಳಕ್ಕೆ ಎರಡು ಮೂರು ರಿಕ್ಷಾದಲ್ಲಿ ಬಂದ ಸುಮಾರು 50ರಷ್ಟಿದ್ದ ಗೂಂಡಾಗಳ ಗುಂಪು, “ಧರ್ಮಸ್ಥಳದ ಹೆಸರು ಕೆಡಿಸುತ್ತಿದ್ದೀರಿ. ನೀವು ಧರ್ಮಸ್ಥಳದ ಹೆಸರು ಕೆಡಿಸಲೆಂದೇ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದೀರಿ” ಎಂಬ ಆರೋಪ ಹೊರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕೈಯ್ಯಲಿದ್ದ ಕ್ಯಾಮರಾ ಹಾಗೂ ಮೈಕ್‌ಗಳನ್ನು ಕೂಡ ಕಸಿದುಕೊಂಡು ನೆಲಕ್ಕೆ ಬಡಿದು ಹೊಡೆದು ಹಾಕಿದ್ದಲ್ಲದೇ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಬೆನ್ನಲ್ಲೇ ಗಾಯಾಳುಗಳನ್ನು ಸ್ಥಳೀಯರು ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಬಂದೋಬಸ್ತ್‌ಗೆ ಕ್ರಮ ಕೈಗೊಂಡಿದ್ದಾರೆ.

WhatsApp Image 2025 08 06 at 6.39.42 PM
WhatsApp Image 2025 08 06 at 6.00.20 PM
WhatsApp Image 2025 08 06 at 6.00.21 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X