ಹೊಸನಗರ ತಾಲೂಕಿನ ಕಾರೆಮಟ್ಟಿ ಗ್ರಾಮದ ಅಂಗನವಾಡಿಯಲ್ಲಿ ನೆನ್ನೆ ದಿವಸ ದಿ. 02-03-25 ರಂದು ತಾಯಂದಿರ ಸಭೆ ಹಾಗೂ ಪೌಷ್ಟಿಕ ಶಿಬಿರ ಹಮ್ಮಿಕೊಳ್ಳಗಿತ್ತು.
ಈ ಕಾರ್ಯಕ್ರಮವನ್ನು ರೇಣುಕಪ್ಪ ಅವರು ಉದ್ಘಾಟಿಸಿದರು. ನಂತರ ಅಂಗನವಾಡಿ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜುನಾಥ್ ರವರು ಕಾರ್ಯಕ್ರಮದ ಪ್ರಾಸ್ತವಿಕ ಭಾಷಣ ನೆರವೇರಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಶ್ರೀಮತಿ ಆಶಾ ರಾಣಿ ಮಾತನಾಡಿ ಕಿಶೋರಿಯವರಿಗೆ ಪೌಷ್ಟಿಕತೆ ಕುರಿತು ಮಾಹಿತಿ ನೀಡಿದರು.

ಅಂಗನವಾಡಿ ಕಾರ್ಯಕರ್ತೆ ಸತ್ಯ ನಾಗರತ್ನರವರು ಕಾರ್ಯಕ್ರಮದಲ್ಲಿ ಗಣ್ಯರನ್ನ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು.