ಹೊಸನಗರ | ಮನೆಗಳ್ಳತನದ ಆರೋಪಿ ಪೊಲೀಸ್ ಬಲೆಗೆ

Date:

Advertisements

ಹೊಸನಗರದ ರಿಪ್ಪನ್ ಪೇಟೆಯ ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ಕೂಡಲೇ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಮತ್ತು ಸಿಪಿಐ ಗುರಣ್ಣ ಹೆಬ್ಬಾಳ್ ಅವರ ಮಾರ್ಗದರ್ಶನದಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದಲ್ಲಿ ಪೋಲೀಸರು ತನಿಖೆ ಆರಂಭಿಸಿದರು. ಸ್ಥಳೀಯ ಗುಪ್ತಚರ ಜಾಲದಿಂದ ಪಡೆದ ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

Advertisements

Hಕಣಬಂದೂರು ಗ್ರಾಮದ ನಿವಾಸಿ ಸಂತೋಷ್ (37) ಎಂಬಾತನು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯಿಂದ ನಾಲ್ಕೂವರೆ ಸಾವಿರ ರೂ ನಗದು, ಎಂಟೂವರೆ ಗ್ರಾಂ ಚಿನ್ನಾಭರಣ, ಹತ್ತು ಗ್ರಾಂ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X