ಹೊಸನಗರ | ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸರಿಯಾಗಿ ಶಿಕ್ಷಕರು ಇಲ್ಲದೆ ; ವಿದ್ಯಾರ್ಥಿಗಳ ಪರದಾಟ

Date:

Advertisements

ಹೊಸನಗರದ ರಿಪ್ಪನ್‌ಪೇಟೆಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ ಕ್ರೀಡೆಗಳ ಅಭ್ಯಾಸ ಮಾಡುವಂತಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ ಚಂದ್ರಪ್ಪ. ಡಿ ಆರೋಪಿಸಿದ್ದಾರೆ.

ಈ ಶಾಲೆಯಲ್ಲಿ 8 ರಿಂದ 1೦ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಪ್ರಸ್ತುತ 430 (ಕಳೆದ ವರ್ಷ 500) ವಿದ್ಯಾರ್ಥಿಗಳಿದ್ದು, ಮೂರು ವರ್ಷಗಳಿಂದ ದೈಹಿಕ ಶಿಕ್ಷಣದ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ದೈಹಿಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಈ ಕುರಿತು ಹಲವು ಬಾರಿ ಶಾಲಾಭಿವೃದ್ಧಿ ಸಮಿತಿಯವರ ಮೂಲಕ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಮನವಿ ನೀಡಿದ್ದರೂ ಯಾವ ಪ್ರಯೋಜನವೂ ಆಗಿಲ್ಲ.ನಮ್ಮ ಮಕ್ಕಳಿಗೆ ಕ್ರೀಡಾಕೂಟಗಳಲ್ಲಿ ಆಸಕ್ತಿ ಇದ್ದು, ಅವರಿಗೆ ಸೂಕ್ತ ಮಾರ್ಗದರ್ಶನವಿಲ್ಲದೆ ಅವರ ಕ್ರೀಡಾ ಕನಸುಗಳು ಕಮರಿ ಹೋಗುತ್ತಿವೆ ಎಂದರು.

Advertisements

ಆದರೂ ಛಲ ಬಿಡದ ಮಕ್ಕಳು ವಿವಿಧ ಕ್ರೀಡಾ ಪುಸ್ತಕಗಳನ್ನು ಓದಿ ತಾವೇ ವಾಲಿಬಾಲ್, ಕಬಡ್ಡಿ, ಖೋ-ಖೋ ಕ್ರೀಡೆಗಳನ್ನು ಅಭ್ಯಾಸ ಮಾಡುತ್ತಿದ್ದಾರೆ. ನಾವು ಹಲವು ಬಾರಿ ಉಪನಿರ್ದೇಶಕರು, ಶಾಸಕರನ್ನು ಹಾಗೂ ಜಿಪಂ ಸಿಇಒರನ್ನು ಭೇಟಿ ಮಾಡಿ ನಮ್ಮ ಶಾಲೆಗೆ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಆದರೆ, ಇದುವರೆಗೂ ಒಬ್ಬ ಶಿಕ್ಷಕರನ್ನೂ ನೇಮಕ ಮಾಡಿಲ್ಲ ಎಂದು ಎಸ್‌ಡಿಎಂಸಿ ಸದಸ್ಯರು ಮಾಧ್ಯಮದವರ ಮುಂದೆ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.’ನಮ್ಮ ಶಾಲೆಯಲ್ಲಿ ಈ ವರ್ಷದ 430 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿಗಳನ್ನು ಸಲ್ಲಿಸಿದರೂ ಕೂಡ ಪ್ರಯೋಜನವಾಗಿಲ್ಲ ಎಂಬ ಆರೋಪವಾಗಿದೆ. 430 ಮಕ್ಕಳಿಗೆ ಒಬ್ಬರೇ ಹಿಂದಿ ಶಿಕ್ಷಕರಿದ್ದಾರೆ. ಈ ಶಾಲೆಗೆ ಡಿ ದರ್ಜೆ ಹುದ್ದೆಗಳಿಲ್ಲ. ಎಸ್‌ಡಿಎಂಸಿಯಿಂದ ಡಿ ದರ್ಜೆ ಹುದ್ದೆ ನೇಮಕ ಮಾಡಿಕೊಳ್ಳಲಾಗಿದೆ. ವಿಜ್ಞಾನ ಲ್ಯಾಬ್ ಇದ್ದರೂ ಕೂಡ ಅಲ್ಲಿ ಅಸಿಸ್ಟೆಂಟ್ ಇಲ್ಲ. ಉರ್ದು ಕಲಾ ವಿಭಾಗಕ್ಕೆ ಶಿಕ್ಷಕರಿಲ್ಲ.

ಇಷ್ಟೆಲ್ಲ ಕೊರತೆಯ ನಡುವೆಯೂ ಎಸ್‌ಡಿಎಂಸಿ ಇರುವ ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚು ಕೆಲಸ ಮಾಡಿಸಿಕೊಳ್ಳುತ್ತಿದೆ ಎಂದು ಎಸ್‌ಡಿಎಂಸಿ ಅಧ್ಯಕ ಚಂದ್ರಪ್ಪ ಡಿ., ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X