ಹೊಸಪೇಟೆ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Date:

ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.

- Advertisement -

ವಿಜಯನಗರ ಜಿಲ್ಲೆಯ ಅಂಗನವಾಡಿ ಮತ್ತು ಸಿಐಟಿಯು ಜಿಲ್ಲಾ ಸಂಚಾಲಕಿ ಮಾತನಾಡಿ, “ಚುನಾವಣೆಯ ಬಿಎಲ್‌ಒದಿಂದ ಹಿಡಿದು ಸರ್ಕಾರದ ವಿವಿಧ ಯೋಜನೆಗಳು ಮತ್ತು ಬಾಣಂತಿಯರ ರಕ್ಷಾ ಕವಚದಂತೆ ಹಗಲು-ರಾತ್ರಿ ಎನ್ನದೇ ಸೇವೆ ಮಾಡುತ್ತೇವೆ. ಅವರನ್ನು ಆಸ್ಪತ್ರೆಗೆ ದಾಖಲಿಸುವುದು, ಚಿಕಿತ್ಸೆ ಕೊಡಿಸುವುದು ಸೇರಿದಂತೆ ಯಾವುದೇ ರೀತಿಯ ಕೆಲಸಗಳಿದ್ದರೂ ಹಿಂದೇಟು ಹಾಕದೆ ಕಾರ್ಯ ನಿರ್ವಹಿಸುತ್ತೇವೆ. ಆದರೆ, ಸರ್ಕಾರ ನಮ್ಮ ಜೊತೆ ತಾರತಮ್ಯ ಮಾಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಗದಗ | ಸ್ಕ್ಯಾನಿಂಗ್ ದರ ಹೆಚ್ಚಿಸಿ, ಮತ್ತೆ ವಿವಾದಕ್ಕೀಡಾದ ಜಿಮ್ಸ್: ಮುತ್ತು ಬಿಳಿಯಲಿ ಆಕ್ರೋಶ

“ಕೋವಿಡ್‌ನಂತಹ ಭಯಾನಕ ಸಂದರ್ಭದಲ್ಲೂ ಕೂಡ ಮನೆ ಬಿಟ್ಟು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ ಮತ್ತು ಪೋಲೀಸ್ ಇಲಾಖೆಯೊಂದಿಗೂ ನಾವು ಜೀವದ ಹಂಗು ತೊರೆದು ಕರ್ತವ್ಯ ಪಾಲಿಸಿದ್ದೇವೆ. ಎಂತಹ ಕಷ್ಟದ ಸಂದರ್ಭದಲ್ಲೂ ಎಲ್ಲ ಇಲಾಖೆಯವರ ಜೊತೆಗಿದ್ದು, ಅವರ ಜತೆ ಜತೆಗೆ ಕಾರ್ಯನಿರ್ಹಿಸುತ್ತಿದ್ದೇವೆ. ಸರ್ಕಾರ ಅಂಗನವಾಡಿ ಕಾರ್ಯಕರ್ತರಾದ ನಮ್ಮನ್ನು ಸರ್ಕಾರ ಕೆಡಿಮೆ ಕೂಲಿ ಅಥವಾ ಸಂಬಳಕ್ಕೆ ದುಡಿಸಿಕೊಳ್ಳುತ್ತಿದೆ. ನಮ್ಮ ನೋವಿಗೆ, ಕಷ್ಠಗಳಿಗೆ ಮಿಡಿಯುತ್ತಿಲ್ಲ. 6ನೇ ವೇತನಕ್ಕೆ ನಮಗೆ ಆದ್ಯತೆ ಮಾಡಿಕೊಡಬೇಕು. ಸರ್ಕಾರ ಆದಷ್ಟು ಬೇಗ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ನಾವು ತೀವ್ರ ಹೋರಾಟದ ಮೂಲಕ ವಿಧಾನಸೌಧಕ್ಕೆ ಮುತಿಗೆ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...