ವಿಜಯನಗರ |ಇಂದಿರಾಗಾಂಧಿ ಮೂರ್ತಿ ಪ್ರತಿಷ್ಠಾಪನೆ ಜಿಲ್ಲಾ ಕಾಂಗ್ರೆಸ್ ಸಂಭ್ರಮ

Date:

Advertisements

ಹೊಸಪೇಟೆ ನಗರದಲ್ಲಿ ಹಲವು ವರ್ಷಗಳಿಂದ ಪಾಳು ಬಿದ್ದಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಾಗೂ ಮೂರ್ತಿಯು ಕಟ್ಟೆಯನ್ನು ಅಭಿವೃದ್ಧಿಪಡಿಸಿ ಬಹು ಕಾಲದ ಬೇಡಿಕೆ ಈಡೇರಿಸಿದೆ ಎಂದು  ಮೂರ್ತಿಗೆ ಹೂವಿನ ಹಾರ ಹಾಕಿ ಸಂಭ್ರಮದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ಸಂತಸಪಟ್ಟರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಎಪ್ಪತ್ತರ ದಶಕದಲ್ಲಿ ಹೊಸಪೇಟೆ ನಗರಕ್ಕೆ ಆಗಮಿಸಿದಾಗ ಈ ಭಾಗದ ಅಭಿವೃದ್ಧಿಗಾಗಿ ವಿಜಯನಗರ ಉಕ್ಕು ಕಾರ್ಖಾನೆಗೆ ಶಿಲಾನ್ಯಾಸ ಮಾಡಿದ್ದರು.ವಿಜಯನಗರ ಉಕ್ಕು ಕಾರ್ಖಾನೆ ಇಂದು ಜಿಂದಾಲ್ ಉಕ್ಕು ಸಂಸ್ಥೆ ಜೆ.ಎಸ್.ಡಬ್ಲೂ. ಕಾರ್ಖಾನೆಯಾಗಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವುದರಲ್ಲಿ ಹೆಸರಾಗಿದ್ದ ಕಾರಣಕ್ಕೆ ಇದರ ರುವಾರಿಯಾದ ಇಂದಿರಾಗಾಂಧಿಯವರ ಮೂರ್ತಿ ಪ್ರತಿಷ್ಠಾಪನೆ ಆಗುವ ಕನಸು ನನಸಾಯಿತು ಎಂದರು.

ಈ ಬಗ್ಗೆ ಕಾಂಗ್ರೆಸ್ ಮುಖಂಡ ಸೋಮಶೇಖರ್ ಬಣ್ಣದ ಮನೆ ಮಾತನಾಡಿ,ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೊಸಪೇಟೆ ನಗರಕ್ಕೆ ಬಂದು ಉಕ್ಕು ಕಾರ್ಖಾನೆ ಶಿಲಾನ್ಯಾಸ ಮಾಡಿ ಸಾವಿರಾರು ಕಾರ್ಮಿಕರಿಗೆ ಉದ್ಯೋಗ ಒದಗಿಸಿಕೊಟ್ಟರು.ಅಂದು ಕಟ್ಟಿದ ಮೂರ್ತಿ ಅದು ದುರಸ್ತಿಗೊಂಡಿತ್ತು.ಮತ್ತೆ ಅದನ್ನು ಪುನರ್ ನಿರ್ಮಾಣ ಮಾಡಿ ಐತಿಹಾಸಿಕ ಕಟ್ಟಡವನ್ನು ಇಂದಿರಾ ಗಾಂಧಿ ಅವರ ಮೊಮ್ಮಗ,ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ವಿರೋದ ಪಕ್ಷದ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ,ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ವೀಕ್ಷಿಸಿ ಉದ್ಘಾಟಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಸೀದಿ ಆವರಣದಲ್ಲಿದ್ದ ಅನಧಿಕೃತ ಮನೆ, ಅಂಗಡಿ ತೆರವು

ದೇಶದಲ್ಲಿ ತುರ್ತು ಪರಿಸ್ಥಿತಿಯಲ್ಲಿದ್ದಾಗ ದೇಶದ ಜನರಿಗೆ ಇಪ್ಪತ್ತು ಅಂಶಗಳ ಕಾರ್ಯಕ್ರಮ ನೀಡಿ ಉಳುವವನೆ ಭೂಮಿಯ ಒಡೆಯ ಎಂದು ಘೋಷಣೆ ಮಾಡಿ ಹಲವಾರು ಬಡ ಕೃಷಿಕರಿಗೆ ಭೂಮಿ ಸಿಗುವಂತೆ ಮಾಡಿದರು.ಪ್ರಮುಖವಾಗಿ ಸರ್ವರಿಗೂ ಶಿಕ್ಷಣ ಸಿಗುವಂತೆ ಕಡ್ಡಾಯ ಶಿಕ್ಷಣ ಘೋಷಣೆ ಮಾಡಿ ದೇಶದ ಕೊಟ್ಯಾಂತರ ದಲಿತ ಸಮುದಾಯಕ್ಕೆ ಅಕ್ಷರ ಜ್ಞಾನ ನೀಡಿದ ಉಕ್ಕಿನ ಮಹಿಳೆ ಎಂದು ಬಿರುದು ಪಡೆದವರು ಎಂದರು.

ಐತಿಹಾಸಿಕ ಕಟ್ಟಡಕ್ಕೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ  ಬಿ ಜೆಡ್ ಜಮೀರ್ ಅಹ್ಮದ್ ಖಾನ್ ,  ಶಾಸಕರಾದ ಎಚ್ ಆರ್ ಗವಿಯಪ್ಪ ,ಮಾಜಿ ಶಾಸಕರು  ವಿಜಯನಗರ ಜಿಲ್ಲಾ ಡಿಸಿಸಿ ಅಧ್ಯಕ್ಷರಾದ ಶಿರಾಜ್ ಶೇಕ, ನಗರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎನ್ ಎಫ್ ಇಮಾಮ್ ನಿಯಾಜಿ ಹಾಗೂ ಇನ್ನಿತರ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು.

ಈ ವೇಳೆ ಸೂರ್ಯನರಾಯಣ, ಸಣ್ಣಮಾರೆಪ್ಪ, ಯರ್ರಿಸ್ವಾಮಿ, ವಾಸುದೇವ್, ಇಮ್ತಿಯಾಜ್, ಸಣ್ಣ ಈರಪ್ಪ, ರಾಮಚಂದ್ರ, ವಿನಾಯಕ ಶೆಟ್ಟರ್, ಶಿವಕುಮಾರ್, ಜಯಣ್ಣ ಪಟ್ಟಿ, ಪ್ರಮೋದ್ ಶೆಟ್ಟಿ, ಗಿರೀಶ್,ಪ್ರಕಾಶ್, ಪಂಪಣ್ಣ, ಹನುಮಂತಪ್ಪ, ಸಜ್ಜಾದ್ ಖಾನ್, ಖಾಜ ಹುಸೇನ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X