ಹೊಸಪೇಟೆ | ʼಜಮೀರ್ ಅಹ್ಮದ್ʼಗೆ ಡಿಸಿಎಂ ಸ್ಥಾನ ನೀಡಿ: ಮುಸ್ಲಿಂ ಮುಖಂಡರ ಒತ್ತಾಯ

Date:

ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕರಾಗಿರುವ ಜಮೀರ್ ಅಹ್ಮದ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ವಿಜಯನಗರ ಜಿಲ್ಲೆಯ ಮುಸ್ಲಿಂ ಸಮುದಾಯ ಆಗ್ರಹಿಸಿದೆ. ಹೊಸಪೇಟೆಯಲ್ಲಿ ಸುದ್ಧಿಗೋಷ್ಠಿ ನಡೆಸಿರುವ ಮುಸ್ಲಿಂ ಮುಖಂಡರು, ಜಮೀರ್ ಅವರು ಕೇವಲ ಒಂದೇ ಸಮುದಾಯಕ್ಕೂ ಸೀಮಿತವಾಗಿಲ್ಲ. ಎಲ್ಲಾ ಸಮುದಾಯದ ಬಡಜನರ ಕಷ್ಟಕ್ಕೆ ಶ್ರಮಿಸಿದ್ದು, ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಮಾತನಾಡಿರುವ ಕೊತ್ವಾಲ್ ಮೊಹಮ್ಮದ್, “ಜಮೀರ್ ಅಹ್ಮದ್‌ ಖಾನ್ ಅವರು ಕೇರಳದಲ್ಲೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಹೆಚ್ಚು ಕೆಲಸ ಮಾಡಿದ್ದಾರೆ. ಹಾಗೆಯೇ ಬಡವರ ಅಭಿವೃದ್ಧಿಗಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದಾರೆ. ಇದನ್ನೆಲ್ಲ ಪರಿಗಣಿಸಿ ಹೈಕಮಾಂಡ್ ನಾಯಕರು, ಜಮೀರ್ ಅಹ್ಮದ್ ಖಾನ್ ರಿಗೆ ಡಿಸಿಎಂ ಸ್ಥಾನ ಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಮುಸ್ಲಿಂ ಮುಖಂಡರಾದ ಜೆ. ಅಥಾಯ್ ಅವರು ಮಾತನಾಡಿ, “ಜಮೀರ್ ಅಹ್ಮದ್ ಅವರು ಪಕ್ಷದ ನಿಷ್ಠಾವಂತ ನಾಯಕ. ಧೈರ್ಯವಾಗಿ ಕೆಲಸ ಮಾಡುವಂತ ವ್ಯಕ್ತಿ. ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತಾರೆ. ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವುಗಳು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಹೀಗಾಗಿ ಜಮೀರ್ ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....