ಬೆಂಗಳೂರು ಭೀಕರ ಘಟನೆ: ಗ್ಯಾಸ್ ಸೋರಿಕೆಯಿಂದ ಹೊತ್ತಿ ಉರಿದ ಮನೆ; ಬಳ್ಳಾರಿ ಮೂಲದ ಇಬ್ಬರು ಸಜೀವ ದಹನ

Date:

ಅಡುಗೆ ಅನಿಲ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಯಾಗಿ, ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಇಬ್ಬರು ಜೀವಂತವಾಗಿ ಸುಟ್ಟುಹೋಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರಿಗೆ ಬೆಂಕಿ ತಗುಲಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ.

- Advertisement -

ನೆಲಮಂಗಲ ಬಳಿಯ ಅಡಕಮಾರನಹಳ್ಳಿಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಬಳ್ಳಾರಿ ಮೂಲದ ನಾಗರಾಜ್ (50) ಮತ್ತು ರಕ್ಷಣೆಗೆ ಧಾವಿಸಿದ ಶ್ರೀನಿವಾಸ್ (50) ಸಜೀವ ದಹನವಾಗಿದ್ದಾರೆ. ಅಲ್ಲದೆ, ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಹಾಗೂ ಬಸವ ಎಂಬವರ ಪರಿಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಡಕಮಾರನಹಳ್ಳಿಯ ಗಂಗಯ್ಯ ಎಂಬವರ ಮನೆಯಲ್ಲಿ ನಾಗರಾಜ್‌ ಕುಟುಂಬ ಬಾಡಿಗೆಗೆ ವಾಸವಾಗಿತ್ತು. ಗುರುವಾರ ಬೆಳಗ್ಗೆ ದೇವರಿಗೆ ಪೂಜೆ ಮಾಡಲು ನಾಗರಾಜ್ ದೀಪ ಹೊತ್ತಿಸಿದ್ದರು. ಇದೇ ವೇಳೆ, ಗ್ಯಾಸ್‌ ಸಿಲಿಂಡರ್ ಬದಲಿಸಲು ನಾಗರಾಜ್ ಅರ ಮಗ ಅಭಿಷೇಕ್ ಮುಂದಾಗಿದ್ದಾರೆ. ಸರಿಯಾಗಿ ರೆಗ್ಯೂಲೇಟರ್‌ಅನ್ನು ಜೋಡಿಸದ ಕಾರಣ ಅನಿಲ ಸೋರಿಯಾಗಿ ಮನೆಯೆಲ್ಲ ಆವರಿಸಿದ್ದು, ಬೆಂಕಿ ಹೊತ್ತಿಕೊಂಡಿದೆ.

ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಮನೆಯ ಒಳಭಾಗದಲ್ಲಿದ್ದ ನಾಗರಾಜ್ ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೆ, ಜೀವಂತವಾಗಿ ಸುಟ್ಟು ಹೋಗಿದ್ದಾರೆ. ಅವರನ್ನು ರಕ್ಷಿಸಲು ಧಾವಿಸಿದ ಪಕ್ಕದ ಮನೆಯ ಶ್ರೀನಿವಾಸ್ ಕೂಡ ಸಜೀವ ದಹನವಾಗಿದ್ದಾರೆ. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19) ಅಭಿಷೇಕ್‌ (18) ಹಾಗೂ ನೆರೆಹೊರೆಯ ನಿವಾಸಿ ಶಿವಶಂಕರ್‌ಗೂ ಬೆಂಕಿ ತಗುಲಿದ್ದು, ಸುಟ್ಟ ಗಾಯಗಳಾಗಿವೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...