ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

Date:

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌ ಪ್ರಯೋಗವಾಗಿ ರಾಜ್ಯದ 2ನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಖ್ಯಾತಿಗೆ ಪಾತ್ರವಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.

- Advertisement -

8 ಮಹಿಳೆಯರು ಹಾಗೂ 10 ಪುರುಷ ಸೇರಿ ಒಟ್ಟು 18 ಮಾರ್ಷಲ್‌ಗಳನ್ನು ಪಾಲಿಕೆ ಕಲಾಪ ನಿರ್ವಹಣೆಗೆ ನೇಮಿಸಲಾಗಿದ್ದು, ಸುಗಮ ಕಲಾಪ ನಡೆಸಲು ಮಾರ್ಷಲ್​ಗಳ ಅಗತ್ಯವಾಗಿದೆ. ಪಾಲಿಕೆ ಸದಸ್ಯರಿಗೆ ಕಲಾಪದ ವೇಳೆ ಅಗತ್ಯ ದಾಖಲೆಗಳನ್ನು ಪೂರೈಸುವುದು, ಗಲಾಟೆಗಳು ಸಂಭವಿಸಿದಾಗ ನಿಯಂತ್ರಿಸುವುದು, ಗಲಾಟೆ ಮಾಡುವ ಸದಸ್ಯರನ್ನು ಹೊರಗೆ ಹಾಕುವುದು ಸೇರಿದಂತೆ ಮೇಯರ್ ಮತ್ತು ಉಪ ಮೇಯರ್ ನೀಡುವ ಆದೇಶಗಳನ್ನು ಪಾಲನೆ ಮಾಡುವ ಕಾರ್ಯದಲ್ಲಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಮೈಸೂರ ದಸರಾ ಕ್ರೀಡಾಕೂಟ; ಜಿಲ್ಲೆಗೆ 111 ಪದಕಗಳು; ವಿಜೇತರಿಗೆ ಅಭಿನಂದನೆ

ಪಾಲಿಕೆ ಅಧಿಕಾರಿ ಶಂಕರಾನಂದ ಬನಶಂಕರಿ ಸೇರಿದಂತೆ ಹಿರಿಯ ಅಧಿಕಾರಿಗಳು ಮಾರ್ಷಲ್‌ಗಳಿಗೆ ವಿಶೇಷ ತರಬೇತಿ ನೀಡಿ ಸಜ್ಜುಗೊಳಿಸಿದ್ದಾರೆ ಎನ್ನಲಾಗಿದ್ದು, ಸಾಮಾನ್ಯ ಸಭೆಯು ಕಾರ್ಯ ಕಲಾಪಗಳನ್ನು ‌ಸುಗಮವಾಗಿ ನಡೆಸಿಕೊಂಡು ಹೋಗಲು ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಷಲ್ ನೇಮಕ ಮಾಡಲಾಗಿದೆ. ಒತ್ತುವರಿ, ರಸ್ತೆ ತೆರವು ಸೇರಿದಂತೆ ಹಲವು ಕಾರ್ಯಕ್ಕೆ ಮಾರ್ಷಲ್‌ಗಳನ್ನು ಬಳಸಿಕೊಳ್ಳಲಾಗುತ್ತದೆ. ಪಾಲಿಕೆಯ ಇತರ ಕೆಲಸ ಕಾರ್ಯಗಳಿಗೂ‌ ಬಳಕೆ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...