ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ; ಆರೋಪಿಯನ್ನು ಗಲ್ಲಿಗೇರಿಸಲು ಸಾರ್ವಜನಿಕರ ಆಗ್ರಹ

Date:

Advertisements

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿರುವ ಅಮಾನುಷ, ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಿ, ಆತನನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಹುಬ್ಬಳ್ಳಿಯ ಅಶೋಕನಗರದಲ್ಲಿ ಬಾಳುಬಿದ್ದ ಶೌಚಾಲಯದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ಮೃತದೇಹವನ್ನು ಕಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಆರೋಪಿ ಪರಾರಿಯಾಗಿದ್ದಾರೆ. ಆರೋಪಿಯ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಯು ಬಿಹಾರ ಮೂಲದವನು ಎಂದು ಹೇಳಲಾಗಿದೆ. ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್‌ ಠಾಣೆಯ ಬಳಿ ಪ್ರತಿಭಟನೆ ನಡೆಸಿರುವ ಸ್ಥಳೀಯರು ಮತ್ತು ಪೋಷಕರು ಆರೋಪಿಯನ್ನು ಬಂಧಿಸಿ, ಎನ್‌ಕೌಂಟರ್‌ ಮಾಡಬೇಕು ಅಥವಾ ಗಲ್ಲಿಗೇರಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

Advertisements

ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಕೊಡುವುದಾಗಿ ಆಮಿಷವೊಡ್ಡಿ ಆಕೆಯನ್ನು ಆರೋಪಿ ಕರೆದೊಯ್ದಿದ್ದಾನೆ. ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪಿ, ಬಾಲಕಿಯನ್ನು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X