ಮಹಾನಗರ ಪಾಲಿಕೆ ಟಿಪ್ಪರ್ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.
ಹಮೀದಾಬಾನು ಕಬಾಡೆ ಮೃತ ಬಾಲಕಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ಕಸ ವಿಲೇವಾರಿ ಟಿಪ್ಪರ್ ಬಾಲಕಿ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಹುಬ್ಬಳ್ಳಿ ಧಾರವಾಡ ಪಾಲಿಕೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದು, ಚಾಲಕನ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.