ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅಭಿಮಾನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಒತ್ತಾಯಿಸಿ ಪ್ರದೇಶ ಕುರುಬ ಸಮಾಜದ ಒಕ್ಕೂಟದ ವತಿಯಿಂದ ಹುಬ್ಬಳ್ಳಿ ಸಬರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಡಿಕೆಶಿ ಅಭಿಮಾನಿಗಳಾದ ಬಿ.ಎನ್. ಕುಮಾರ ಹಾಗೂ ಶಾನಬೋಗರಹಳ್ಳಿ ಗ್ರಾಮದ ಮಹೇಶ ಆಗಸ್ಟ್ 8ರಂದು ರಾತ್ರಿ ಮಂಡ್ಯ ತಾಲೂಕಿನ ಬಸರಾಳ ಗ್ರಾಮದ ಹೇಮಾವತಿ ಬಡಾವಣೆಯಲ್ಲಿ ಸಾರ್ವಜನಿಕವಾಗಿ ಕುರುಬ ಸಮಾಜವನ್ನು ಮತ್ತು ಕುರುಬ ಜಾತಿಯ ಬಗ್ಗೆ ಜಾತಿ ನಿಂದನೆ ಮಾಡಿ ಹಾಗೂ ಕುರುಬ ಸಮಾಜದ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಮುಖ್ಯಮಂತ್ರಿ ಅಭಿಮಾನಿಗಳಲ್ಲಿ ನೋವುಂಟು ಮಾಡಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದರಿಂದ ಇಡೀ ಕುರುಬ ಸಮಾಜಕ್ಕೆ ಅವಮಾನವಾಗಿದೆ. ಆರೋಪಿತರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕುರುಬ ಸಮಾಜದ ಮುಖಂಡರು, ಸಿಎಂ ಅಭಿಮಾನಿಗಳು ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇಂಥಹ ಘಟನೆ ನಡೆದರೂ ಪೊಲೀಸ್ ಇಲಾಖೆ ಮೌನವೇಕೆ ವಹಿಸಿದೆ!” ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಿದ್ದಣ್ಣ ತೇಜಿ, ಎಚ್ ಕೆ ದೊಡ್ಮನಿ, ನಿಂಗಪ್ಪ ಜಕ್ಲಿ, ರವಿ ಕಟ್ಟಿಮನಿ, ರವಿರಾಜ್ ಕಂಬಳಿ, ಕೋಪ ದೈಗುಡಿ, ಧರ್ಮಣ್ಣ ಕುರಿ, ಶಶಿಧರ್ ನವೀನ್ ಜಂಗನ್ನವರ್ ಮುಂತಾದವರು ಇದ್ದರು.
ಇದನ್ನೂ ಓದಿ: ಹುಬ್ಬಳ್ಳಿ | ಪ್ರಲ್ಹಾದ್ ಜೋಶಿ ಎಲ್ಲಿದ್ದಾರೆಂದು ಪತ್ತೆ ಹಚ್ಚಬೇಕಿದೆ: ವಿಜಯಕುಮಾರ ಗುಂಜಾಳ ಟೀಕೆ