ಹುಬ್ಬಳ್ಳಿ | ಮಹಾನಗರ ಪಾಲಿಕೆಗೆ ಪೌರಕಾರ್ಮಿಕರ ಮುತ್ತಿಗೆ; ಖಾಯಂ ನೇಮಕಾತಿಗೆ ಆಯುಕ್ತರ ಭರವಸೆ

Date:

ಪೌರಕಾರ್ಮಿಕರು ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 7ರಂದು ಮಧ್ಯಾಹ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ನಂತರ ಪಾಲಿಕೆ‌ ಆಯುಕ್ತ ರುದ್ರೇಶ ಗಾಳಿ ಬರುವ ಮೇ. 11ರಂದು ರವಿವಾರ, 127 ಜನ‌ ಪೌರಕಾರ್ಮಿಕರಿಗೆ ನೇರ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

- Advertisement -

ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಪಾಲಿಕೆ ಕಚೇರಿಗೆ ಮುತ್ತಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, ಪಾಲಿಕೆಯ 933 ನೇರ ವೇತನ ಪೌರಕಾರ್ಮಿಕರಿಗೆ 4 ತಿಂಗಳು ಸಂಕಷ್ಟ ಬತ್ತೆ ಪಾವತಿಸಿದ್ದೇವೆ. ಅಲ್ಲದೇ 251 ನೇರ ವೇತನ ಪೌರಕಾರ್ಮಿಕರಿಗೆ 5 ತಿಂಗಳು ಸಂಕಷ್ಟ ಬತ್ತೆ ರೂ 5 ಲಕ್ಷ ಪಾವತಿಸಿದ್ದೇವೆ. ಅಲ್ಲದೇ 3 ದಿನಗಳಲ್ಲಿ ಪೌರಕಾರ್ಮಿಕರಿಗೆ ಗುರುತಿನ ಚೀಟಿ (ಐಡಿ‌ ಕಾರ್ಡ್) ನೀಡಲಾಗುವುದು. ಸದ್ಯದಲ್ಲೇ ಪೌರಕಾರ್ಮಿಕರ ಸಂಘದ ಸಭೆ ಕರೆದು ಅವರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಹಿಂದೂಗಳ ರಕ್ಷಣೆಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ: ಸಚಿವ ಆರ್.ಬಿ.ತಿಮ್ಮಾಪುರ

ಈ ಸಂದರ್ಭದಲ್ಲಿ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಡಾ.ವಿಜಯ ಗುಂಟ್ರಾಳ, ಗಂಗಮ್ಮ ಸಿದ್ರಾಮಪುರ, ಅನಿತಾ ಈನಗೊಂಡ, ಗಾಳೆಪ್ಪ ದ್ವಾಸಲಕೇರಿ, ದತಪ್ಪ ಆಪುಸಪೇಟ್, ಕನಕಪ್ಪ ಕೋಟಬಾಗಿ, ಲಕ್ಷ್ಮೀ ಬೇತಾಪಲ್ಲಿ ಪಾರವ್ವ ಹೊಸಮನಿ ಭಾಗ್ಯಲಕ್ಷ್ಮೀ ಮಾದರ, ಎಸ್ಟುರೆಮ್ಮ ಭಂಡಾರಿ, ಮಹೇಶ ಮಾದರ, ತಾಯಪ್ಪ ಕಣೆಕಲ್, ಶರೀಫ್ ಮಸರಕಲ್ ನಾಗರಾಜ್ ದೊಡ್ಡಮನಿ, ಶಿವಮ್ಮ ಬೇವಿನಮರದ, ವೆಂಕಟೇಶ್ ಪಾಲವಾಯಿ, ಪದ್ಮಾ ಚಿಕ್ಕಣ್ಣವರ, ಪ್ರಶಾಂತ್ ಶಿಕ್ಕಲಗಾರ, ರಮೇಶ ಗೊಲ್ಲರ, ಶಾಂತವ್ವ ಚುರಮುರಿ, ದುರಗಮ್ಮ ಗೊಲ್ಲರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...