ಹುಬ್ಬಳ್ಳಿ | ಕಿಮ್ಸ್ ಮುಂಭಾಗದಲ್ಲಿ ಗುತ್ತಿಗೆ ನೌಕರ ಆತ್ಮಹತ್ಯೆ ಯತ್ನ: ಡೀಸೆಲ್ ಸುರಿದುಕೊಂಡು ಪ್ರತಿಭಟನೆ​

Date:

ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನೌಕರರೊಬ್ಬರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನನೊಂದು, ಆಸ್ಪತ್ರೆಯ ಮುಂಭಾಗದಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಅನಾಹುತ ತಪ್ಪಿಸಿದ್ದಾರೆ.

- Advertisement -

​ಆತ್ಮಹತ್ಯೆಗೆ ಯತ್ನಿಸಿದ ನೌಕರನನ್ನು ಹನುಮಂತ ಛಲವಾದಿ ಎಂದು ಗುರುತಿಸಲಾಗಿದ್ದು, ಕಳೆದ 14 ವರ್ಷಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಆಸ್ಪತ್ರೆಯ ಆಡಳಿತ ಮಂಡಳಿಯು ಯಾವುದೇ ಪೂರ್ವಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಿದೆ ಎನ್ನಲಾಗಿದೆ. ಉದ್ಯೋಗ ಕಳೆದುಕೊಂಡಿದ್ದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಹನುಮಂತ, ಬುಧವಾರ ಮಧ್ಯಾಹ್ನ ಕಿಮ್ಸ್ ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಏಕಾಏಕಿ ಜೊತೆಗೆ ತಂದಿದ್ದ ಡೀಸೆಲ್ ಮೈಮೇಲೆ ಸುರಿದುಕೊಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ಧಿ ಓದಿದ್ದೀರಾ? ಧಾರವಾಡ | ತಳ ಸಮುದಾಯಗಳು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಬೆಳೆಯಬೇಕು: ಎಫ್.ಎಚ್.ಜಕ್ಕಪ್ಪನವರ

​ಹನುಮಂತ ಛಲವಾದಿ ಆತ್ಮಹತ್ಯೆಗೆ ಮುಂದಾಗುತ್ತಿದ್ದಂತೆ, ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಕರ್ತವ್ಯ ನಿರತರಾಗಿದ್ದ ಆಸ್ಪತ್ರೆ ಭದ್ರತಾ ಸಿಬ್ಬಂದಿ ತಕ್ಷಣ ಆತ್ಮಹತ್ಯೆ ಯತ್ನವನ್ನು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದಾಗಿ ಆಸ್ಪತ್ರೆ ಮುಂಭಾಗದಲ್ಲಿ ಕೆಲಕಾಲ ತೀವ್ರ ಗೊಂದಲದ ವಾತಾವರಣ ಉಂಟಾಗಿತ್ತು. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಹನುಮಂತ ಅವರನ್ನು ವಶಕ್ಕೆ ಪಡೆದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಗುತ್ತಿಗೆ ನೌಕರರನ್ನು ಏಕಾಏಕಿ ತೆಗೆದುಹಾಕಿರುವ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ನೌಕರರ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...