ಹುಬ್ಬಳ್ಳಿ | ಗುತ್ತಿಗೆದಾರ ಮೋಹನ್ ಚವ್ಹಾಣ್ ಅಪಹರಣ ಪ್ರಕರಣ; 10 ಜನರ ಬಂಧನ

Date:

ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗುತ್ತಿಗೆದಾರ ಮೋಹನ್ ಚವ್ಹಾಣ್​ ಎಂಬುವರನ್ನು ಅಪಹರಣ ಮಾಡಿದ್ದ ಹಿನ್ನೆಲೆಯಲ್ಲಿ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಉಪ ಪೊಲೀಸ್ ಠಾಣೆಯಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ತಿಳಿಸಿದ್ದಾರೆ.

- Advertisement -

ಕಳೆದ ಬುಧವಾರ ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಮೋಹನ್ ಚವ್ಹಾಣ್​ ಎಂಬವರನ್ನು ಬಸಪ್ಪ ದಳವಾಯಿ ಸೇರಿದಂತೆ 15 ರಿಂದ 20 ಜನರು ಕೂಡಿಕೊಂಡು ಬ್ರೌನ್ ಕಲರಿನ ರಿನಾಯಲ್ಪ ಟ್ರೈಬರ್ ಕಂಪನಿಯ ನಂಬರ್ ಪ್ಲೇಟ್ ಇರದೇ ಇದ್ದ ಕಾರಿನಲ್ಲಿ ಹಾಗೂ ಒಂದು ಕ್ರೂಸರ್ ವಾಹನದಲ್ಲಿ ಬಂದು ಮಾರಕಾಸ್ತ್ರಗಳನ್ನು ತೋರಿಸಿ, ಎಲ್ಲರೂ ಅರವಿಂದ ಚವ್ಹಾಣ ಆಫಿಸಿನೊಳಗೆ ಅತಿಕ್ರಮ ಪ್ರವೇಶ ಮಾಡಿ ಆಫೀಸ್ ಸಿಬ್ಬಂದಿಗೆ ಅಶ್ಲೀಲವಾಗಿ ಬೈದು, ಹಲ್ಲೆ ಮಾಡಿ ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿದ್ದರ ಬಗ್ಗೆ ಮೋಹನ್ ಸಹೋದರ ಅರವಿಂದ್ ಚವ್ಹಾಣ್​ ಎಂಬವರು ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದು ಇತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
kmc 20251010 180909 1

ಈ ಸುದ್ದಿ ಓದಿದ್ದೀರಾ? ಧಾರವಾಡ | ಹುಬ್ಬಳ್ಳಿಗೆ ಕಾಲಿಟ್ಟ ಯುವ ಪರಿವರ್ತನೆ ಯಾತ್ರೆ

ನಗರದ ವಿಮಾನ ನಿಲ್ದಾಣದ ಬಳಿ ಕಾರನ್ನು ತಡೆಯಲು ಯತ್ನಿಸಿದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದರು. ನಂತರ ಆರೋಪಿಗಳನ್ನು ಬೆನ್ನತ್ತಿದ ಪೊಲೀಸರು ಧಾರವಾಡದ ಕೆ.ಸಿ.ಪಾರ್ಕ್ ಬಳಿ ಪ್ರಮುಖ ಆರೋಪಿ ಬಸಪ್ಪ ದಳವಾಯಿ ಸೇರಿದಂತೆ ಹತ್ತು ಜನರನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣಕ್ಕೆ ಒಳಗಾಗಿದ್ದ ಗುತ್ತಿಗೆದಾರ ಮೋಹನ್ ಚವ್ಹಾಣ್​ನನ್ನು ಬೆಳಗಾವಿ ಜಿಲ್ಲೆ ಬೈಲಹೊಂಗಲ ಬಳಿ ವಶಕ್ಕೆ ಪಡೆಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರದ ಕಾರಣಕ್ಕಾಗಿ ಈ ಅಪಹರಣ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಘಟನೆ ಕುರಿತಂತೆ ಇನ್ನೂ ಹತ್ತಕ್ಕೂ ಅಧಿಕ ಜನರು ಭಾಗಿಯಾಗಿರುವ ಶಂಕೆ ಇದ್ದು, ಆದಷ್ಟು ಬೇಗ ಅವರನ್ನು ವಶಕ್ಕೆ ಪಡೆಯುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಾನವ ಪ್ರಕೃತಿಯ ಭಾಗ ಎಂಬುದನ್ನು ಮರೆಯಬಾರದು; ಹರೀಶ್ ಎನ್.ಆರ್

ಕಳಸ : ಇಂದಿನ ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯ ಸೇರಿದಂತೆ...

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ...

ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಎರಡು ದಿನದ ಕ್ರೀಡೆಗೆ ಕೋಟ್ಯಂತರ ರೂಪಾಯಿ; ಅನ್ನದಾತನಿಗೆ ಅಲ್ಪ ಪರಿಹಾರ! ದಸರಾ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...