ಹುಬ್ಬಳ್ಳಿ | ಶಾಸಕ ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಆಗ್ರಹ

Date:

ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಒತ್ತಾಯಿಸಿದ್ದಾರೆ.

ಪ್ರಸಾದ್ ಅಬ್ಬಯ್ಯ ಅಭಿಮಾನಿಗಳ ಬಳಗದವರು ಹುಬ್ಬಳ್ಳಿಯ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಹುಬ್ಬಳ್ಳಿ-ಧಾರವಾಡ ಪೂರ್ವ (ಎಸ್‌ಸಿ ಮೀಸಲು) ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ 135 ಸ್ಥಾನಗಳ ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದು, ಸಚಿವ ಸಂಪುಟದಲ್ಲಿ ಪ್ರಸಾದ್‌ ಅಬ್ಬಯ್ಯ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು” ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವುದೇ ಹಗರಣವಿಲ್ಲದ ಆರೋಪಗಳಿಲ್ಲದೆ, ಕಪ್ಪು ಚುಕ್ಕೆ ಇಲ್ಲದೆ ಹತ್ತು ವರ್ಷಗಳ ಕಾಲ ಜನಸೇವೆ ಮಾಡಿರುವ ಪ್ರಸಾದ ಅಬ್ಬಯ್ಯ ಅವರನ್ನು ಸಚಿವರನ್ನಾಗಿ ಮಾಡಿದರೆ ಹುಬ್ಬಳ್ಳಿ ಧಾರವಾಡ ಅವಳಿ ನಗರವು ಸರ್ವತೋಮುಖ ಅಭಿವೃದ್ಧಿ ಕಾಣುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಬಗ್ಗೆ ಸುಧಾಕರ್ ಆರೋಪ ಸತ್ಯಕ್ಕೆ ದೂರವಾದ್ದು: ಎಂಟಿಬಿ ನಾಗರಾಜ್

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಪ್ರಕಾಶ ಬುರಬುರೆ ನಿರಂಜನ ಹಿರೇಮಠ, ಮೋಹನ, ಸಿದ್ದಪ್ಪ, ಮೇಟಿ ಪರುಪಪ್ಪ, ಬಳಗಣ್ಣವರ ಚನ್ನಬಸಪ್ಪ, ಅಸುಂಡಿ ಶೇಖಣ್ಣ ಬೆಂಡಿಗೇರಿ, ಕುಮಾರ ಕುಂದನಳ್ಳಿ, ಬಸವರಾಜ ಕುಂದಗೋಳ, ಅಜ್ಜಪ್ಪ ಸುರಕೋಡ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

ದಾವಣಗೆರೆ ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲಿನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಗೆ ಬೆಂಬಲ

ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳಮೀಸಲಾತಿಯನ್ನು ಕೇವಲ ನರೇಂದ್ರ ಮೋದಿ ನೇತೃತ್ವದ...

ನೇಹಾ ಕೊಲೆ ಪ್ರಕರಣ | ಎನ್‌ಕೌಂಟರ್‌ ಜಾರಿಯಾಗಬೇಕು: ಸಚಿವ ಸಂತೋಷ್‌ ಲಾಡ್

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ...