ಹುಬ್ಬಳ್ಳಿ-ಧಾರವಾಡ | ಐಪಿಎಲ್‌ ಕ್ರಿಕೆಟ್ ಜೂಜು ತಡೆಯಲು ಪೊಲೀಸ್‌ ಕಣ್ಗಾವಲು

Date:

  • ಕ್ರಿಕೆಟ್ ಬೆಟ್ಟಿಂಗ್‌ ವಿರುದ್ಧ ವಿಶೇಷ ಯೋಜನೆ ರೂಪಿಸಿರುವ ಪೊಲೀಸರು
  • ಬೆಟ್ಟಿಂಗ್‌ ಕಾರಣದಿಂದ ಸಮಸ್ಯೆ ಸುಳಿಯಲ್ಲಿ ಹಲವು ಕುಟುಂಬಗಳು

ಭಾರತದ ಬಹುನಿರೀಕ್ಷಿತ ಕ್ರಿಕೆಟ್ ಲೀಗ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31ರಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ನಡುವಿನ ಮುಖಾಮುಖಿಯೊಂದಿಗೆ ಪ್ರಾರಂಭವಾಯಿತು. ಐಪಿಎಲ್ ಪಂದ್ಯ ನಡೆಯುವ ಸಂದರ್ಭದಲ್ಲಿ ಅವಳಿ ನಗರದಲ್ಲಿ ಕ್ರಿಕೆಟ್ ಜೂಜು ತಡೆಯಲು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಅಧಿಕಾರಿಗಳು ಸಜ್ಜಾಗಿದ್ದರು.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬೆಟ್ಟಿಂಗ್ ವಿರುದ್ಧ ಎಚ್ಚರಿಕೆ ನೀಡಿದ್ದು, ಈ ಬಾರಿ ಬೆಟ್ಟಿಂಗ್ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳಲು ಹುಬ್ಬಳ್ಳಿ-ಧಾರವಾಡ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

“ಈ ಬಾರಿ ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಕಣ್ಗಾವಲಿದ್ದೇವೆ. ಐಪಿಎಲ್ ಪಂದ್ಯಗಳ ಸಮಯದಲ್ಲಿ ಇದನ್ನು ಪರಿಶೀಲಿಸುವ ಉದ್ದೇಶದಿಂದ, ವಿಶೇಷ ಯೋಜನೆಯನ್ನು ರೂಪಿಸಲಾಗಿದೆ. ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಮತ್ತು ಬೆಟ್ಟಿಂಗ್ ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಪೊಲೀಸ್ ಕಮಿಷನರ್ ರಮಣ್ ಗುಪ್ತಾ ತಿಳಿಸಿದ್ದಾರೆ.

“ಇನ್‌ಸ್ಪೆಕ್ಟರ್‌ ಶ್ರೇಣಿಯ ಅಧಿಕಾರಿಯೊಬ್ಬರು ಕ್ರಿಕೆಟ್ ಬೆಟ್ಟಿಂಗ್ ಕುರಿತು ಮೇಲ್ವಿಚಾರಣೆ ಮಾಡುತ್ತಾರೆ. ಸಿಸಿಬಿಯ ಇನ್ಸ್‌ಪೆಕ್ಟರ್ ಕ್ರಿಕೆಟ್ ಬೆಟ್ಟಿಂಗ್ ಮೇಲೆ ನಿಗಾ ಇಟ್ಟು ಜೂಜುಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಇನ್‌ಸ್ಪೆಕ್ಟರ್‌ ರಮೇಶ್ ಕಾಂಬ್ಳೆ ಅವರು ಹುಬ್ಬಳ್ಳಿ-ಧಾರವಾಡದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮೇಲೆ ಹಲವು ಪೊಲೀಸ್ ಠಾಣೆಗಳ ಸಿಬ್ಬಂದಿಯೊಂದಿಗೆ ವಿಶೇಷ ಪೊಲೀಸ್ ತಂಡ ರಚಿಸಿ ಮೇಲ್ವಿಚಾರಣೆ ನಡೆಸಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಜಿಲ್ಲಾಧಿಕಾರಿ ಮನೆ ಮುಂದಿನ ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ

“ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ವಿಶೇಷ ಜಾಗರೂಕತೆಯ ಅಗತ್ಯ ಕಂಡುಕೊಂಡ ಪೊಲೀಸ್ ಆಯುಕ್ತರು ಎಚ್-ಡಿ ಪೊಲೀಸ್ ಕಮಿಷನರೇಟ್‌ನ ಸಿಸಿಬಿ ವಿಭಾಗಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ನೇಮಿಸಿದ್ದಾರೆ” ಎಂದು ಹೇಳಿದ್ದಾರೆ.

“ಹುಬ್ಬಳ್ಳಿ-ಧಾರವಾಡದ ಬಹುತೇಕ ಕುಟುಂಬಗಳು ತಮ್ಮ ಕುಟುಂಬ ಸದಸ್ಯರ ಕ್ರಿಕೆಟ್ ಬೆಟ್ಟಿಂಗ್ ಅಭ್ಯಾಸದಿಂದ ಈ ಹಿಂದೆ ಹಲವಾರು ಸಮಸ್ಯೆಗಳನ್ನು ಎದುರಿಸಿವೆ. ಕ್ರಿಕೆಟ್ ಬೆಟ್ಟಿಂಗ್ ಮೇಲೆ ನಿಗಾ ಇಡಲು ಪೊಲೀಸ್ ಇನ್ಸ್‌ಪೆಕ್ಟರ್ ನಿಯೋಜಿಸುವುದು ಪೊಲೀಸ್ ಆಯುಕ್ತರ ಉತ್ತಮ ಯೋಜನೆಯಾಗಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಮೇಶ್ ಎಸ್ ಶ್ಲಾಘಿಸಿದ್ದಾರೆ.

“ಅವಳಿ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಾನೂನಿನ ಭಯ ಹುಟ್ಟಿಸುವ ಅಗತ್ಯವಿದೆ. ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಕಾಟ, ರೋಗಿಗಳು ಹೈರಾಣು

ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ...

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ಬೆಳಗಾವಿ | ಅಧಿವೇಶನದಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ,...