ಸಾಲಗಾರರ ಕಿರುಕುಳಕ್ಕೆ ಬೇಸತ್ತು, ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಎಸ್.ಎಮ್.ಕೃಷ್ಣ ನಗರದಲ್ಲಿ ಸೋಮವಾರ ನಡೆದಿದೆ.
ಬಾಷಾಸಾಬ್ ಸಂಕೇಶ್ವರ್ (65) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸಾಲಗಾರರು ಹಣ ವಾಪಸ್ ಕೊಡುವಂತೆ ಪೀಡಿಸುತ್ತಿದ್ದರು ಎಂದು ಆರೋಪಿಗಳ ಮಾಹಿತಿ ಸಹಿತ ವೀಡಿಯೊ ಮಾಡಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ಸಾಮೂಹಿಕ ಅತ್ಯಾಚಾರ ಪ್ರಕರಣ : ಮೂವರ ಬಂಧನ
ಈ ಕುರಿತು ಕಸಬಾ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.