ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

Date:

Advertisements

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ.

ಮೃತ ಗೃಹಿಣಿ ಜಯಶ್ರೀ ಬಡಿಗೇರ್(31) ಎಂಬುವವರು ಶಿವಾನಂದ್ ಜತೆಗೆ ಮೇ 21ರಂದು ಮದುವೆಯಾಗಿದ್ದರು. 13 ವರ್ಷದ ಪ್ರೀತಿಯನ್ನು ಮುಚ್ಚಿಟ್ಟು ಜಯಶ್ರೀಯನ್ನು ವಿವಾಹವಾಗಿದ್ದ ಎನ್ನಲಾಗಿದ್ದು, ಈ ಬಗ್ಗೆ ಮದುವೆ ನಂತರ ಜಯಶ್ರೀಗೆ ಓರ್ವ ಯುವತಿ ಮಾಹಿತಿ ನೀಡಿದ್ದಾಳೆ. ಇದರಿಂದ ಆಘಾತಗೊಂಡ ಜಯಶ್ರೀ ಎಲ್ಲವನ್ನು ಮರೆತು ಗಂಡನೊಂದಿಗೆ ಇರಲು ಮುಂದಾಗಿದ್ದರು.

ಇದೇ ವಿಷಯದಿಂದ ದಂಪತಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಶಿವಾನಂದ್ ತನ್ನ ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದನೆಂದು ಜಯಶ್ರೀ ಅವರ ಕುಟುಂಬಸ್ಥರು ದೂರಿದ್ದಾರೆ. “ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದು, ಬೆಳಗಾಗುವುದರಲ್ಲಿ ಜಯಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆಯಲ್ಲ, ತಮ್ಮ ಮಗಳನ್ನು ಶಿವಾನಂದ ಕೊಲೆ ಮಾಡಿ ನೇಣಿಗೆ ಹಾಕಿದ್ದಾನೆ” ಎಂದು ಜಯಶ್ರೀ ಪೋಷಕರು ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸಿಂದಗಿ | ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ಗೆ ಹೋಗುವ ದಾರಿ ಕೆಸರುಮಯ

ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಮೃತ ಮಹಿಳೆಯ ಕುಟುಂಬದ ಆರೋಪಗಳನ್ನು ಆಧರಿಸಿ, ಶಿವಾನಂದ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪೊಲೀಸರು ಶವಪರೀಕ್ಷೆ ವರದಿ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ತನಿಖೆಯನ್ನು ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X