ಹುಬ್ಬಳ್ಳಿ | ಮಾನವ ಹಕ್ಕುಗಳು ಹುಟ್ಟಿನಿಂದಲೇ ಬರುತ್ತವೆ: ಸುರೇಶ್ ಒಂಟಿಗೋಡಿ

Date:

Advertisements

ಜಿ ಕೆ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ವತಿಯಿಂದ ರುದ್ರಾಕ್ಷಿ ಮಠ ದತ್ತಿ, ಡಾ. ಬಿ ವಿ ಶಿರೂರು ದತ್ತಿ, ಲಿಂ.‌ ಪಾರ್ವತವ್ವ ಶಿವಬಸಪ್ಪ ಕೌಜಲಗಿ ಸ್ಮರಣಾರ್ಥ ದತ್ತಿ ಹಾಗೂ ಹಠಯೋಗಿ ಸಿದ್ದಪ್ಪಜ್ಜ ದತ್ತಿ ಉಪನ್ಯಾಸ ಏರ್ಪಡಿಸಿದ್ದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ್ ವಂಟಿಗೋಡಿ ಮಾತನಾಡಿ, ನಮ್ಮ ಸಂವಿಧಾನವು ಮಾನವ ಹಕ್ಕುಗಳನ್ನು ಹುಟ್ಟಿನಿಂದಲೇ ಬರುವಂತೆ ಅಧಿಕೃತಗೊಳಿಸಿದೆ. ಎರಡನೇ ಜಾಗತಿಕ ಮಹಾಯುದ್ಧದ ಸಾವು, ನೋವು, ಹಾನಿ ಗಮನಿಸಿದ ವಿಶ್ವದ ರಾಷ್ಟ್ರಗಳು ಒಂದುಗೂಡಿ ಮಾನವನ ಜೀವನ ಸಂರಕ್ಷಣೆ ಉದ್ದೇಶದಿಂದ 1994 ರಲ್ಲಿ ಒಪ್ಪಂದ ಮಾಡಿಕೊಂಡಿವೆ. ಹುಟ್ಟುವ ಪ್ರತಿಯೊಬ್ಬ ವ್ಯಕ್ತಿಗೆ ಬದುಕುವ ಹಕ್ಕು, ಸ್ವಾತಂತ್ರ್ಯದ ಹಕ್ಕು, ಗೌರವದ ಹಕ್ಕು ಮೊದಲಾದ ಹಕ್ಕುಗಳಿಗೆ ಚ್ಯುತಿ ಬಾರದಂತೆ ಕಾಪಾಡಿಕೊಂಡು ಹೋಗಲು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ರಚನೆ ಆಗಿದೆ. ಸರ್ಕಾರಿ ನೌಕರರು ಅಧಿಕಾರಿಗಳು ನಾಗರಿಕರ ಹಕ್ಕುಗಳ ಉಲ್ಲಂಘನೆ ಮಾಡಿದರೆ ಮಾನವ ಹಕ್ಕುಗಳ ಆಯೋಗ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಆದೇಶಿಸುತ್ತದೆ ಎಂದು ತಿಳಿಸಿದರು.

ಜಾನಪದ ಜಾಣೆ ಲಕ್ಷ್ಮೀ ಆರಿಬೆಂಚಿ ಮಾತನಾಡಿ, ಮಾನವ ಹಕ್ಕುಗಳ ಕುರಿತು ಜನಪದ ಸಾಹಿತ್ಯದಲ್ಲಿ ಬಂದಿರುವುದನ್ನು ಹಾಡುವುದರ ಮೂಲಕ ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ಸಿ ಆರ್ ಪಾಟೀಲ್ ಮಾನವ ಹಕ್ಕುಗಳ ಆಯೋಗವು ವಕೀಲರಿಗೆ ಮತ್ತು ಕಾನೂನು ವಿಧ್ಯಾರ್ಥಿಗಳಿಗೆ ತರಬೇತಿ ಶಿಬಿರಗಳನ್ನು ಆಗಾಗ ಏರ್ಪಡಿಸಬೇಕು ಎಂದು ಮನವಿ ಮಾಡಿದರು. ಪ್ರೊ. ಕೆ ಎಸ್ ಕೌಜಲಗಿ ಸ್ವಾಗತಿಸಿದರು. ಡಾ. ಲಿಂಗರಾಜ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisements

ದತ್ತಿ ದಾನಿಗಳಾದ ಡಾ. ಬಿ ವಿ ಶಿರೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.‌ ದತ್ತಿ ದಾನಿಗಳ ಪರವಾಗಿ ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮಿಗಳು ಮಾತನಾಡಿದರು. ಈ ವೇಳೆ ಪ್ರಾಚಾರ್ಯ ಡಾ. ಡಿ ಬಿ ಚೌರಿ, ಡಾ ‌ ಶಾರದಾ ಪಾಟೀಲ, ಸಿ ಬಿ ಮರಿಗೌಡರ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಸಿದ್ದಮ್ಮ ಅಡವೆನ್ನವರ, ಅನಸುಯಾ ಪಾಟೀಲ, ಪ್ರೊ. ಸೌಂದರ್ಯ ಜೋಶಿ ಉಪಸ್ಥಿತರಿದ್ದರು.‌ ಕಸಾಪ ತಾಲೂಕು ಅಧ್ಯಕ್ಷೆ ವಿದ್ಯಾ ವಂಟಮುರಿ ವಂದಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X