ಹುಬ್ಬಳ್ಳಿ | ಬಿಸಿಲಿನ ಝಳಕ್ಕೆ ತಂಪೆರೆದ ಮಳೆ

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಬೇಸತ್ತಿದ್ದ ಜನತೆಗೆ ತಂಪಿನ ವಾತಾವರಣದ ಅನುಭವ ನೀಡಿದೆ.

ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಮಿಂಚಿನ ಸಹಿತ ಉತ್ತಮ ಮಳೆಯಾಗಿದೆ. ಸೋಮವಾರ ಸಂಜೆಯೂ ಒಂದಿಷ್ಟು ಮಳೆಯಾಗಿ ಇಳೆ ತಂಪಾಗಿತ್ತು. ಚಂಡಮಾರುತದ ಪರಿಣಾಮದಿಂದ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ಹೊಕ್ಕಿದೆ. ಗ್ರಾಮೀಣ ಭಾಗದಲ್ಲಿ ಉಳುಮೆಗೆ ಅನುಕೂಲವನ್ನೂ ಮಾಡಿಕೊಟ್ಟಿದೆ.

“ಜೂನ್ ಮೊದಲ ವಾರ ಮುಂಗಾರು ಆರಂಭವಾಗುವ ಹಿನ್ನಲೆಯಲ್ಲಿ ಭೂಮಿ ಹದಗೊಳಿಸಲು ಮಳೆಯ ಅವಶ್ಯಕತೆ ಇತ್ತು. ಈಗ ಸುರಿದ ಮಳೆಯಿಂದಾಗಿ ರೈತರು ಮುಂಗಾರು ಬಿತ್ತನೆಯ ತಯಾರಿಯಲ್ಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ರಸ್ತೆ ದಾಟಲು ಪರದಾಡುತ್ತಿರುವ ವಾಹನ ಸವಾರರು

ಅಲ್ಲಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿವೆ. ಈಗ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ನೀರು ಸಂಪೂರ್ಣ ರಸ್ತೆಯನ್ನು ಆವರಿಸಿದೆ. ಇದರಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ಯಾವುದು ರಸ್ತೆ, ಯಾವುದು ಗುಂಡಿ ಎಂಬುದು ತಿಳಿಯದೆ ದ್ವಿಚಕ್ರ ವಾಹನ ಸವಾರರು ರಸ್ತೆ ದಾಟಲು ಪರದಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ಹುಬ್ಬಳ್ಳಿ ನಗರದಲ್ಲಿ ಮಳೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯದ ಪರಿಣಾಮ ರಸ್ತೆ ಮೇಲೆಯೇ ನೀರು ಹರಿಯುತ್ತಿದ್ದು, ಹಲವಾರು ಬೈಕ್‌ಗಳು ಮಳೆ ನೀರಿನಿಂದ ಆವೃತವಾಗಿವೆ. ಇನ್ನು ಮಾರುಕಟ್ಟೆ ಪ್ರದೇಶದಲ್ಲಿನ ಪರಿಸ್ಥಿತಿಯಂತೂ ಹೇಳತೀರದು. ಮಳೆಯಾಗುವ ಸೂಚನೆ ಇದ್ದರೂ ನಿರೀಕ್ಷೆಗೆ ಮೀರಿ ಮಳೆಯಾಗಿದೆ.

ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಚುನಾವಣಾ ಮಸ್ಟರಿಂಗ್ ಕೇಂದ್ರವಿದ್ದು, ಮಳೆಯಿಂದಾಗಿ ಮಸ್ಟರಿಂಗ್ ಕಾರ್ಯವು ಅಸ್ತವ್ಯಸ್ತವಾಗಿದೆ. ಊಟದ ಸಮಯಕ್ಕೆ ಮಳೆ ಸುರಿದ ಪರಿಣಾಮ ಇಡೀ ಶಾಮಿಯಾನ ಸೋರಲಾರಂಭಿಸಿದೆ. ಇನ್ನು ಮತಯಂತ್ರ ಸೇರಿದಂತೆ ಇತರೆ ಸಾಮಾಗ್ರಿಗಳನ್ನು ತೆಗೆದುಕೊಂಡು ವಾಹನದ ಬಳಿ ಹೋಗಲಾರದಂತಹ ಸ್ಥಿತಿ ನಿರ್ಮಾಣವಾಗಿದ್ದು, ಚುನಾವಣಾ ಸಿಬ್ಬಂದಿ ಪರದಾಡುವಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...

ಕೊಡಗು | ಬಡ ಜನರ ಜೀವನಕ್ಕೆ ಉರುಳಾದ ಭೂ ಗುತ್ತಿಗೆ ಆದೇಶ

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ಮೂಲಭೂತ ಹಕ್ಕುಗಳು ಹೋಗಲಿ ಕೊಡಗಿನ...