ದೇಶದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿದೆ. ದಲಿತ ಸಮುದಾಯದವರನ್ನು ಕೊಲೆ ಮಾಡಲಾಗುತ್ತದೆ. ದಲಿತರು ಹಿಂದೂಗಳಲ್ಲವೇ? ಅವರಿಗೇಕೆ ರಕ್ಷಣೆಯಿಲ್ಲ? ಎಂದು ಪ್ರಶ್ನಿಸಿದರು.
ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಕಾರು ಲಾರಿ ಡಿಕ್ಕಿ; 5 ಮಂದಿ ಸ್ಥಳದಲ್ಲೇ ಸಾವು
‘ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರೆ ಅದು ಜಾತಿ ಗಣತಿ, ಪ್ರಧಾನಿ ನರೇಂದ್ರ ಮೋದಿ ನಡೆಸಿದೆ ಯಾವ ಗಣತಿ? ರಾಜಕೀಯಕ್ಕಾಗಿ ಬಿಜೆಪಿಯವರು ಅರ್ಥವಿಲ್ಲದ ಹೇಳಿಕೆ ನೀಡುತ್ತ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ’. ಜಾತಿ, ಧರ್ಮವನ್ನು ಮುಂದಿಟ್ಟುಕೊಂಡು ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.