ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

Date:

“ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರಂಭದಿಂದಲೂ ಎಚ್ಚರಿಸಲಾಗಿತ್ತು. ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಕುರಿತು ಹಲವು ಆಕ್ಷೇಪಗಳು ಕೇಳಿಬಂದಿವೆ. ಕರ್ನಾಟಕದಲ್ಲಿಯೂ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ಬಗ್ಗೆ ಅನುಮಾನಗಳಿವೆ” ಎಂದು ನಾಗರಿಕ ಮತ ಕಾವಲು ಸಮಿತಿ ಮುಖಂಡ ನೂರ್ ಶ್ರೀಧರ ಆರೋಪಿಸಿದರು.

- Advertisement -

ಹುಬ್ಬಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಕಿ ಮತ ಕಾವಲು ಸಮಿತಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಿಂದಾಗಿ ದುಡಿಯುವ ಹಾಗೂ ಶೋಷಿತ ವರ್ಗದ ಅನೇಕ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು ಒತ್ತಾಯಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

“ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಮಂಡಿಸಿ, ಆಕ್ಷೇಪಣೆಗಳನ್ನು ಸ್ವೀಕರಿಸಿ ತಿದ್ದುಪಡಿ ಮಾಡುವ ವ್ಯವಸ್ಥೆ ಚುನಾವಣಾ ಪ್ರಕ್ರಿಯೆಯಲ್ಲಿದೆ. ಆದರೆ ಈ ಕ್ರಮ ಸಮರ್ಪಕವಾಗಿ ನಡೆದಿಲ್ಲ. ಸರ್ಕಾರದ ವತಿಯಿಂದ ಹೆಲ್ಪ್‌ಡೆಸ್ಕ್‌ ಹಾಗೂ ಮನೆಮನೆಗೆ ದಾಖಲೆ ಒದಗಿಸುವ ವ್ಯವಸ್ಥೆ ಮಾಡುವುದಾಗಿ ಹೇಳಲಾಗಿದ್ದರೂ ಅದು ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ಮತದಾರರ ಸಂಖ್ಯೆ ಹಾಗೂ ಎಸ್‌ಐಆರ್‌ ನಂತರದ ಪಟ್ಟಿಯಲ್ಲಿನ ಸಂಖ್ಯೆಯಲ್ಲಿನ ವ್ಯತ್ಯಾಸದ ಕುರಿತು ಸ್ಪಷ್ಟತೆ ನೀಡಬೇಕು. ಹೆಸರುಗಳನ್ನು ಕೈಬಿಡುವ ಸಂದರ್ಭದಲ್ಲಿ ಸೂಕ್ತ ಪರಿಶೀಲನೆ ನಡೆಸಬೇಕು. ಜೀವಂತ ವ್ಯಕ್ತಿಗಳನ್ನು ಮೃತಪಟ್ಟವರು ಎಂದು ನಮೂದಿಸಿರುವುದು, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂಬ ಕಾರಣ ಸೇರಿದಂತೆ ಹಲವು ಕಾರಣಗಳಿಂದ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ದೂರುಗಳು ಬಂದಿವೆ. ಸುಮಾರು ಶೇ.90ರಷ್ಟು ಜನರಿಗೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದೇ ತಿಳಿದಿಲ್ಲ” ಎಂದು ಅವರು ಹೇಳಿದರು.

“ಎಸ್‌ಐಆರ್‌ ಪ್ರಕ್ರಿಯೆಯ ಪರಿಣಾಮವನ್ನು ಪರಿಶೀಲಿಸಲು ರಾಜ್ಯದ 25 ಜಿಲ್ಲೆಗಳಿಂದ 100 ಬೂತ್‌ಗಳನ್ನು ಮಾದರಿಯಾಗಿ ಆಯ್ಕೆ ಮಾಡಲಾಗಿದೆ. ಎಸ್‌ಐಆರ್‌ಗೂ ಮುನ್ನ ಇದ್ದ ಮತದಾರರ ಸಂಖ್ಯೆ, ಪ್ರಸ್ತುತ ಪಟ್ಟಿಯಲ್ಲಿರುವ ಸಂಖ್ಯೆ ಹಾಗೂ ಕೈಬಿಡಲಾದ ಮತದಾರರ ಸಂಖ್ಯೆಯ ಕುರಿತು ಅಧ್ಯಯನ ನಡೆಸಿ, ಸೆ.30ರಂದು ಪ್ರಾಥಮಿಕ ವರದಿಯನ್ನು ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು” ಎಂದರು.

ವಕೀಲ ತಾಹಿರ್ ಹುಸೇನ್ ಮಾತನಾಡಿ, “ಎಸ್‌ಐಆರ್‌ನಿಂದ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಪ್ರತಿರೋಧ ಪ್ರವಾಸ ಕೈಗೊಳ್ಳಲಾಗಿದೆ” ಎಂದರು.

ಕೆ.ಎಲ್. ಅಶೋಕ ಮಾತನಾಡಿ, “ಬಿಹಾರ ಚುನಾವಣೆಗೂ ಮುನ್ನವೇ ಕರ್ನಾಟಕದಲ್ಲಿ ಎಸ್‌ಐಆರ್‌ ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಇದು ಜನವಿರೋಧಿ ಹಾಗೂ ಸಂವಿಧಾನ ವಿರೋಧಿ ಪ್ರಕ್ರಿಯೆ ಎಂಬ ತಮ್ಮ ವಾದವನ್ನು ಸಾಕ್ಷ್ಯಾಧಾರಗಳೊಂದಿಗೆ ಜನರ ಮುಂದಿಡಲಾಗುತ್ತಿದೆ. ಹಲವು ಸಂಘಟನೆಗಳು ಅಭಿಯಾನಕ್ಕೆ ಕೈಜೋಡಿಸಿವೆ. ಸೆ.29ರಂದು ಮಂಡ್ಯದಲ್ಲಿ ಅಭಿಯಾನ ಅಂತ್ಯಗೊಳ್ಳಲಿದ್ದು, ಸೆ.30ರಂದು ಬೆಂಗಳೂರಿನಲ್ಲಿ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿ ಮುಂದಿನ ಹೋರಾಟದ ಕುರಿತು ಚರ್ಚಿಸಲಾಗುವುದು” ಎಂದು ತಿಳಿಸಿದರು.

ದೂರವಾಣಿ ಮೂಲಕ ಮಾತನಾಡಿದ ನಟ ಪ್ರಕಾಶ್ ರೈ, “ಎಸ್‌ಐಆರ್‌ ಪ್ರಕ್ರಿಯೆಯಿಂದ ಅನೇಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಡಿಮೆ ಅವಧಿಯಲ್ಲಿ ದೊಡ್ಡ ಪ್ರಮಾಣದ ಮತದಾರರ ಸಮಸ್ಯೆಗಳನ್ನು ಪರಿಹರಿಸುವುದು ಕಷ್ಟ. ತರಾತುರಿಯಲ್ಲಿ ಪ್ರಕ್ರಿಯೆ ನಡೆಸುತ್ತಿರುವುದೇಕೆ ಎಂಬುದಕ್ಕೆ ಸ್ಪಷ್ಟನೆ ನೀಡಬೇಕು. ಅಸಹಾಯಕ ಹಾಗೂ ದುಡಿಯುವ ವರ್ಗದ ಜನರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರತಿಕಾಇಸಬೆಲ್ಲ ಜೆವೆಲ್ಲರ್, ಗುರುನಾಥ ಉಳ್ಳಿಕಾಶಿ, ಮಹೇಶ ಪತ್ತಾರ, ಬಸವರಾಜ ಸೂಳೆಬಾವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...