ಹುಬ್ಬಳ್ಳಿ | ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರ ಪಾತ್ರ ಅಪಾರ: ಸತೀಶ್ ಜಾರಕಿಹೊಳಿ

Date:

ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರು ಪ್ರಮುಖ ಪಾತ್ರ ವಹಿಸಿದ್ದಾರೆ‌. ಸರಿಯಾದ ದಿಕ್ಕಿನಲ್ಲಿ ಸಾಗಲು ಅವರ ಮಾರ್ಗದರ್ಶನ ಅವಶ್ಯವಾಗಿದೆ. ಎಲ್ಲರನ್ನೂ ಬೆಸೆಯುವ ಇಂತಹ ಸಮ್ಮೇಳನಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

- Advertisement -

ಹಳೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ‌ ಹಮ್ಮಿಕೊಂಡಿದ್ದ ಸೂಫಿ ಸಂತರ ಸಮಾವೇಶದಲ್ಲಿ ಮಾತನಾಡಿದ ಅವರು, “ದೇಶ ಸ್ವಾತಂತ್ರ್ಯಗೊಳ್ಳಲು ಎಲ್ಲ ಸಮುದಾಯದವರೂ ಹೋರಾಟ ಮಾಡಿದ್ದಾರೆ. ಸಮಾಜದಲ್ಲಿ ಭಾವೈಕ್ಯ ನೆಲೆಸಲು ನಾವೆಲ್ಲ ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು. ಹಿಂದೂ ಮುಸ್ಲಿಮರು ಒಂದಾಗಿ ಹೋರಾಟ ಮಾಡಿದಾಗ ಯಶಸ್ಸು‌ ಗಳಿಸಲು ಸಾಧ್ಯ. ಅಂಬೇಡ್ಕರ್, ಬಸವೇಶ್ವರರ ಅನುಯಾಯಿಗಳು ಒಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ಅಡ್ಡಂಡ ಕಾರ್ಯಪ್ಪನವರ ನಾಟಕದ ವಿವಾದ: ಗೋಡ್ಸೆ ವೈಭವೀಕರಣದ ಹಿಂದೆ...

ಗೋಡ್ಸೆಯನ್ನು ವೈಭವೀಕರಿಸುವ ರಾಜಕೀಯವನ್ನು ಕೇವಲ ಒಬ್ಬ ವ್ಯಕ್ತಿಯ ಅಭಿಮಾನ ಅಥವಾ ಇತಿಹಾಸದ ಪರ್ಯಾಯ ಓದು ಎಂದು ಸೀಮಿತಗೊಳಿಸಲಾಗದು. ಅದರ ಮೂಲಕ ಗಾಂಧೀಜಿಯವರನ್ನು ಸಾರ್ವಜನಿಕ ಸ್ಮೃತಿಯಿಂದ ದೂರಮಾಡಿ, ಅವರ ಹತ್ಯೆಯನ್ನು ಸಮರ್ಥಿಸಬಹುದಾದ ವಾತಾವರಣ ನಿರ್ಮಿಸುವ...

ಗೋಮಾಂಸ ನಿಷೇಧವಿರಲಿ, ‘ಬೀಫ್ ತಿನ್ನಬೇಡಿ’ ಎಂದು ಹೇಳಿಲ್ಲ ಮನುಸ್ಮೃತಿ!

ಗುಜರಾತ್‌ ಕೋರ್ಟ್‌ ಮನುಸ್ಮೃತಿಯನ್ನು ಗೋರಕ್ಷಣೆಯ ಏಕೈಕ ಆಧಾರವೆಂದು ಬಿಂಬಿಸಲು ಹೊರಟಾಗ, ಮನುಸ್ಮೃತಿಯು ತಾನೇ ಸೃಷ್ಟಿಸಿದ ಈ ವೈರುಧ್ಯಗಳನ್ನೂ ನಾವು ಎತ್ತಿ ತೋರಿಸಬೇಕಾಗುತ್ತದೆ. ಮನುಸ್ಮೃತಿ ನೇರವಾಗಿ 'ಬೀಫ್ ತಿನ್ನಬೇಡಿ' ಎಂದೂ ಹೇಳಿಲ್ಲ, 'ತಿನ್ನಿ' ಎಂದೂ...

ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿ, “ದೇಶದ ಅಭಿವೃದ್ಧಿಗೆ ಕೋಮು ಸಾಮರಸ್ಯ ಅವಶ್ಯ. ದ್ವೇಷ ಬಿಟ್ಟು ಎಲ್ಲರನ್ನೂ ಪ್ರೀತಿಯಿಂದ ಗೆಲ್ಲಬೇಕು ಎಂಬುದು ಈ ಸಮಾವೇಶದ ಸಂದೇಶವಾಗಿದೆ. ಈ ಭಾಗದ ಅನೇಕ ಸೂಫಿ ಸಂತರು ಕೋಮು ಸೌಹಾರ್ದ ನೆಲೆಸಲು ವಿಶೇಷ ಕೊಡುಗೆ ನೀಡಿದ್ದಾರೆ. ನಾವೆಲ್ಲ ಒಂದು ಎಂಬ ಸಂದೇಶ ಸಾರಿದ್ದಾರೆ. ಅದನ್ನು ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ” ಎಂದು ಅಭಿಪ್ರಾಯಪಟ್ಟರು.

ಸಚಿವ ಶಿವಾನಂದ ಪಾಟೀಲ ಮಾತನಾಡಿ, “ಬ್ರಿಟಿಷರು ಸಮಾಜದಲ್ಲಿ ಜಾತಿ ಬೀಜವನ್ನು ಬಿತ್ತಿದ್ದಾರೆ. ಅದನ್ನು ಕಿತ್ತೊಗೆಯಬೇಕಿದೆ. ಅಧಿಕಾರಕ್ಕಾಗಿ ಯಾರು ಏನು ಬೇಕಾದರೂ ಮಾತನಾಡುತ್ತಾರೆ. ಇಂತಹ ಸಮಾವೇಶದ ಮೂಲಕ ಅಂತವರನ್ನು ನಿಯಂತ್ರಿಸುವ ಕೆಲಸ ಆಗಬೇಕು ಎಂದರು.

ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, “ಜಾತಿ ಧರ್ಮ ನಮ್ಮ ಮನೆಯ ಹೊಸ್ತಿಲ ಒಳಗಿರಬೇಕು. ಮನೆಯಿಂದ ಹೊರಬಂದರೆ ನಾವೆಲ್ಲ ಭಾರತ ದೇಶದ ಸುಪುತ್ರರಂತೆ ಬದುಕಬೇಕು. ಮಾನವರೆಲ್ಲ ಒಂದು ಎಂಬ ಏಕತೆ ಮೂಡಬೇಕು. ದೇಶದಲ್ಲಿ ಸೂಫಿ ಸಂತರು, ಬಸವಾದಿ ಶರಣರು ಬಾರದೇ ಇದ್ದಿದ್ದರೆ ನದಿಗಳಲ್ಲಿ ನೀರಿನ ಬದಲು ರಕ್ತ ಹರಿಯುತ್ತಿತ್ತು. ಅವರೆಲ್ಲ ಭಾವೈಕ್ಯದ ಸಂದೇಶ ಸಾರಿದ್ದಾರೆ. ಸೂಫಿ ಸಂತರು ಎಲ್ಲ ಧರ್ಮಗಳ ಕೊಂಡಿಯಂತೆ ಕೆಲಸ ಮಾಡಿದ್ದಾರೆ. ದ್ವೇಷ ಬಿಡು ಪ‍್ರೀತಿ ಮಾಡು ಎಂಬ ಸಂದೇಶವನ್ನು ಐದು ಶತಮಾನಗಳ ಹಿಂದೆಯೇ ಫಕೀರೇಶ್ವರರು ನೀಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ: ಶಾಸಕ ಕೊತ್ತೂರು ಮಂಜುನಾಥ್

ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ಮಾತನಾಡಿ, “ಸಿದ್ಧಾರೂಢರು ನಡೆದಾಡಿದ ನೆಲದಲ್ಲಿ ಹಿಂದೂ ಮುಸ್ಲಿಮರು ಸೌಹಾರ್ದದಿಂದ ಬದುಕುತ್ತಿದ್ದೇವೆ. ಈ ಒಗ್ಗಟ್ಟನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ” ಎಂದರು.

ಈ ಸಂದರ್ಭದಲ್ಲಿ ನಾಡಿನ ಎಲ್ಲ ಲಿಂಗಾಯತ ಸ್ವಾಮೀಜಿ, ಸಂತರು, ಸೂಫಿಗಳು, ಇಸ್ಲಾಂ ಧರ್ಮ ಗುರುಗಳು, ಸಚಿವ ರಹೀಂ‌ ಖಾನ್, ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್‌, ಹುಡಾ ಅಧ್ಯಕ್ಷ ಶಾಕೀರ ಸನದಿ, ಕಾಂಗ್ರೆಸ್‌ ಮುಖಂಡ ಜಿ ಎಸ್ ಪಾಟೀಲ, ಅನಿಲಕುಮಾರ ಪಾಟೀಲ, ಇಮ್ರಾನ್ ಯಲಿಗಾರ, ಅಲ್ತಾಫ್ ಕಿತ್ತೂರ, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್, ಪೊಲೀಸ್ ಕಮಿಷನರ್‌ ಎನ್ ಶಶಿಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜೀವನದಲ್ಲಿ ಯಶಸ್ಸು ಸಾಧಿಸಲು ಕೌಶಲ್ಯ ಅಗತ್ಯ: ಪ್ರಶಾಂತ ಸುತಾರ

"ಕಲಿಕೆಯೊಂದಿಗೆ ಗಳಿಕೆಯಾಗಬೇಕಾದರೆ ಕೌಶಲಜ್ಞಾನ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ...

ಬಾಗಲಕೋಟೆ | ಕಬ್ಬು ಬೆಲೆಗಾಗಿ ರೈತರ ಹೋರಾಟ; ಕಟಾವಿಗೆ ಹೊರರಾಜ್ಯದ 70 ಸಾವಿರ ಕಾರ್ಮಿಕರ ಆಗಮನ!

ಒಂದೆಡೆ ಕಬ್ಬಿಗೆ ನ್ಯಾಯಯುತ ಬೆಲೆ ದೊರಕಬೇಕೆಂದು ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೆ,...

ರಾಯಚೂರು | ಮಸ್ಕಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಸಾಲುಮರದ ತಿಮ್ಮಕ್ಕ ಟೀ ಪಾರ್ಕ್ ನಿರ್ಮಾಣ

ಐತಿಹಾಸಿಕ ಮಸ್ಕಿ ಪಟ್ಟಣದ ಸೌಂದರ್ಯ ಹೆಚ್ಚಿಸುವುದರ ಜತೆಗೆ ಸಾರ್ವಜನಿಕರಿಗೆ ಉತ್ತಮ ಪರಿಸರ...