ಹುಬ್ಬಳ್ಳಿ | ಮಹಿಳೆ ಮೇಲಿನ ಅತ್ಯಾಚಾರದ ವೀಡಿಯೋ ಪ್ರಕರಣ; ಮೂವರ ಬಂಧನ; ಕಮಿಷನರ್ ಹೇಳಿದ್ದೇನು?

Date:

ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಮಾಹಿತಿ ನೀಡಿದ್ದಾರೆ.

- Advertisement -

ಜ. 9ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಹಳೆ ಹುಬ್ಬಳ್ಳಿಯ ಹೆಗ್ಗೆರಿ ಮೈದಾನದಿಂದ ಇಬ್ಬರು ವ್ಯಕ್ತಿಗಳು 35 ವರ್ಷದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಮಧ್ಯಪಾನ ಮಾಡಿಸಿದ್ದು, ಆ ಸಂದರ್ಭದಲ್ಲಿ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ದೈಹಿಕ ಸಂಪರ್ಕದ ವಿಡಿಯೋ ಆಧಾರದ ಮೇಲೆ ಮಹಿಳೆಯನ್ನು ಪತ್ತೆ ಹಚ್ಚಲಾಗಿದೆ. ಕಳೆದ ಒಂದೂವರೆ ತಿಂಗಳಿಂದ ಆಕೆ ಹುಬ್ಬಳ್ಳಿಯ ವಿವಿಧೆಡೆ ಸಂಚರಿಸುತ್ತಿದ್ದಳು. ಆರಂಭದಲ್ಲಿ ಆಕೆಯ ಗುರುತು ತಿಳಿಯದ ಕಾರಣ ಸೋಮೊಟೊ ಪ್ರಕರಣ ದಾಖಲಿಸಲಾಗಿತ್ತು. ನಂತರ ಮಹಿಳೆಯ ಹೇಳಿಕೆ ಪಡೆದು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದರು.

ಪ್ರಕರಣದ ಪ್ರಮುಖ ಮೂವರು ಆರೋಪಿಗಳಾದ ಶಿವಾನಂದ, ಗಣೇಶ್ ಮತ್ತು ಪ್ರದೀಪ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರದೀಪ್ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಶಿವಾನಂದ ಹಾಗೂ ಗಣೇಶ್ ಅವರನ್ನು ಸ್ಥಳೀಯ ಮುಖಂಡರು ಬೈದು, ಥಳಿಸಿರುವ ಘಟನೆ ಕೂಡ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳಿಂದಲೂ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಮಹಿಳೆಯ ಆರೋಗ್ಯ ಸ್ಥಿತಿ ಸುಸ್ಥಿರವಾಗಿದ್ದು, ಗಂಡನೊಂದಿಗೆ ಜಗಳವಾದ ಹಿನ್ನೆಲೆ ಆಕೆ ಹುಬ್ಬಳ್ಳಿಗೆ ಬಂದಿದ್ದಳು. ಸಿದ್ಧಾರೂಢ ಮಠದಲ್ಲಿ ಊಟ ಮಾಡಿಕೊಂಡು, ಬೇಡುತ್ತಾ ನಗರದಲ್ಲಿ ತಿರುಗುತ್ತಿದ್ದಳು ಎಂದು ತಿಳಿದುಬಂದಿದೆ. ಮಹಿಳೆಯ ಗಂಡ ಶಿವಮೊಗ್ಗ ಜೈಲಿನಲ್ಲಿ ಒಂದು ಪ್ರಕರಣದ ಆರೋಪಿಯಾಗಿ ಬಂಧನದಲ್ಲಿದ್ದಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ ಧಾರವಾಡ | ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ: ಡಾ. ಶ್ರೀರಾಮ ಬೆಲ್ಡೋನಾ

ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...